Publish Date: Thu, 23 Mar 2023 (15:17 IST)
Updated Date: Thu, 23 Mar 2023 (14:35 IST)
ಗಾಂಧಿನಗರ : ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಿಗ್ ರಿಲೀಫ್ ಸಿಕ್ಕಿದ್ದು ಸೂರತ್ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
2019ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್ ಕೋರ್ಟ್ ಗುರುವಾರ ಬೆಳಗ್ಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿತ್ತು.
ಶಿಕ್ಷೆ ವಿಧಿಸಿದ ಬೆನ್ನಲ್ಲೇ ರಾಹುಲ್ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಸಿದ್ದು ಸೂರತ್ ಕೋರ್ಟ್ 30 ದಿನಗಳ ಜಾಮೀನು ಮಂಜೂರು ಮಾಡಿದ್ದು ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.