Select Your Language

Notifications

webdunia
webdunia
webdunia
webdunia

ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ಹಣ ವಂಚನೆ: ಪ್ರಹ್ಲಾದ್‌ ಜೋಶಿ ಸಹೋದರನಿಗೆ ಬಿಗ್ ರಿಲೀಫ್‌

Central Minister Prahladh Joshi, Lok Sabha Ticket- Cheating Case, Gopala Joshi,

Sampriya

ಬೆಂಗಳೂರು , ಸೋಮವಾರ, 28 ಅಕ್ಟೋಬರ್ 2024 (18:31 IST)
Photo Courtesy X
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಕೋಟ್ಯಂತರ ರೂಪಾಯಿ ಹಣ ವಂಚಿಸಿದ ಆರೋಪದಲ್ಲಿ ಬಂಧಿಯಾಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್ ಸಿಕ್ಕಿದೆ.  

ತನಿಖೆ ಹಾಗೂ ದೂರಿನ ಆಧಾರದಲ್ಲಿ ಆನಂತರ ಕೈಗೊಂಡಿರುವ ಎಲ್ಲ ಕ್ರಮಗಳಿಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಬಿಡುಗಡೆಗೆ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಅರ್ಜಿದಾರರನ್ನು ಕಾನೂನಿನ ಅನ್ವಯ ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶನವನ್ನು  ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ  ಹೊರಡಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ದೇವಾನಂದ ಚೌವ್ಹಾಣ್ ಹಾಗೂ ಪತ್ನಿ ಸುನೀತಾ ಚೌವ್ಹಾಣ್ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದಲ್ಲಿ ಗೋಪಾಲ್ ಜೋಶಿ ವಿರುದ್ಧ ದೂರು ದಾಖಲಾಗಿತ್ತು.

ಇದರ ಅನ್ವಯ ಸುನೀತಾ ಚೌವ್ಹಾಣ್ ನೀಡಿದ ದೂರಿನ ಹಿನ್ನೆಲೆಯಲಿ ಗೋಪಾಲ್ ಜೋಶಿ, ಅವರ ಮಗ ಹಾಗೂ ಸಹೋದರಿ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಮುಡಾ ನಿವೇಶನ ಹಗರಣ: ಸಿಎಂ ಸಿದ್ದರಾಮಯ್ಯ ಬೆಂಬಲಿಗನಿಗೂ ಇಡಿ ಬಿಸಿ