ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ಹಣ ವಂಚನೆ: ಪ್ರಹ್ಲಾದ್‌ ಜೋಶಿ ಸಹೋದರನಿಗೆ ಬಿಗ್ ರಿಲೀಫ್‌

Sampriya
ಸೋಮವಾರ, 28 ಅಕ್ಟೋಬರ್ 2024 (18:31 IST)
Photo Courtesy X
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವುದಾಗಿ ಕೋಟ್ಯಂತರ ರೂಪಾಯಿ ಹಣ ವಂಚಿಸಿದ ಆರೋಪದಲ್ಲಿ ಬಂಧಿಯಾಗಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರನಿಗೆ ಬಿಗ್ ರಿಲೀಫ್ ಸಿಕ್ಕಿದೆ.  

ತನಿಖೆ ಹಾಗೂ ದೂರಿನ ಆಧಾರದಲ್ಲಿ ಆನಂತರ ಕೈಗೊಂಡಿರುವ ಎಲ್ಲ ಕ್ರಮಗಳಿಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಬಿಡುಗಡೆಗೆ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಅರ್ಜಿದಾರರನ್ನು ಕಾನೂನಿನ ಅನ್ವಯ ಬಿಡುಗಡೆ ಮಾಡಬೇಕು ಎಂದು ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶನವನ್ನು  ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ  ಹೊರಡಿಸಿದೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ದೇವಾನಂದ ಚೌವ್ಹಾಣ್ ಹಾಗೂ ಪತ್ನಿ ಸುನೀತಾ ಚೌವ್ಹಾಣ್ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪದಲ್ಲಿ ಗೋಪಾಲ್ ಜೋಶಿ ವಿರುದ್ಧ ದೂರು ದಾಖಲಾಗಿತ್ತು.

ಇದರ ಅನ್ವಯ ಸುನೀತಾ ಚೌವ್ಹಾಣ್ ನೀಡಿದ ದೂರಿನ ಹಿನ್ನೆಲೆಯಲಿ ಗೋಪಾಲ್ ಜೋಶಿ, ಅವರ ಮಗ ಹಾಗೂ ಸಹೋದರಿ ವಿರುದ್ಧ ಬಸವೇಶ್ವರ ನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments