Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಬಿಗ್ ಶಾಕ್; ಪಕ್ಷದ ಮತ್ತೊಬ್ಬ ಹಿರಿಯ ನಾಯಕ ಬಿಜೆಪಿಗೆ ಸೇರ್ಪಡೆ

Webdunia
ಶುಕ್ರವಾರ, 15 ಮಾರ್ಚ್ 2019 (06:51 IST)
ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ವೇಳೆ  ಕಾಂಗ್ರೆಸ್ ನ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುವುದರ ಮೂಲಕ ಕಾಂಗ್ರೆಸ್ ಗೆ ಬಿಗ್ ಶಾಕ್ ನೀಡುತ್ತಿದ್ದಾರೆ.


ಹೌದು . ಉಗ್ರರ ಶಿಬಿರದ ಮೇಲೆ ಭಾರತೀಯ ವಾಯು ಪಡೆ ನಡೆಸಿದ ಏರ್ ಸ್ಟ್ರೈಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಕ್ಕೆ ಬೇಸರಗೊಂಡ ಕಾಂಗ್ರೆಸ್‍ ನ ಹಿರಿಯ ನಾಯಕ, ಸೋನಿಯಾ ಗಾಂಧಿ ಅವರ ಆಪ್ತರಾಗಿದ್ದ ಟಾಮ್ ವಡಕ್ಕನ್ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ನೇತೃತ್ವದಲ್ಲಿ ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ಪಾಕಿಸ್ತಾನದ ಬಾಲಕೋಟ್ ಉಗ್ರರ ಶಿಬಿರದ ಮೇಲೆ ಭಾರತೀಯ ವಾಯು ಪಡೆ ನಡೆಸಿದ ಏರ್ ಸ್ಟ್ರೈಕ್ ಹಾಗೂ ದೇಶದ ಸಶಸ್ತ್ರ ಪಡೆಯಗಳ ಕುರಿತು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ. ಒಂದು ರಾಜಕೀಯ ಪಕ್ಷವೇ ದೇಶದ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಹೀಗಾಗಿ ನಾನು ಪಕ್ಷವನ್ನು ತ್ಯಜಿಸುವುದು ಅನಿವಾರ್ಯವಾಯಿತು ಎಂದು ಟಾಮ್ ವಡಕ್ಕನ್ ತಿಳಿಸಿದ್ದಾರೆ. 


ಅಲ್ಲದೇ ಕಾಂಗ್ರೆಸ್ ಪಕ್ಷದಲ್ಲಿ ನಾಯಕರನ್ನು ಬಳಸಿಕೊಂಡು, ಬೇಡವಾದಾಗ ಕೈಬಿಡಲಾಗುತ್ತಿದೆ. ಅಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments