ತ್ರಿಪುರಾ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಗೆಲುವು: ಮೋದಿ ಸರ್ಕಾರಕ್ಕೆ ಬಲ ಎಂದ ಶಾ

Sampriya
ಬುಧವಾರ, 14 ಆಗಸ್ಟ್ 2024 (14:57 IST)
Photo Courtesy X
ನವದೆಹಲಿ: ತ್ರಿಪುರಾದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಮುಖ್ಯಮಂತ್ರಿ ಮುಖ್ಯಮಂತ್ರಿ ಮಾಣಿಕ್‌ ಸಹಾ ಅವರು ಮತದಾರರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಆಗಸ್ಟ್ 8ರಂದು ನಡೆದ ಚುನಾವಣೆಯಲ್ಲಿ 34 ಪಟ್ಟಣ ಪಂಚಾಯತಿಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಜತೆಗೆ, ಎಲ್ಲಾ 8 ಜಿಲ್ಲಾ ಪರಿಷತ್‌ಗಳಲ್ಲಿ ಗೆಲುವಿನ ನಗೆ ಬೀರಿದ್ದು, 606 ಗ್ರಾಮ ಪಂಚಾಯತಿಗಳ ಪೈಕಿ 585 ಪಂಚಾಯತಿಗಳಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿದೆ.

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವಿಗೆ ಕಾರಣರಾದ ತ್ರಿಪುರಾದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಜನರ ಬಳಿಗೆ ಕೊಂಡೊಯ್ಯಲು ಅವಿರತ ಶ್ರಮಿಸಿದ ಮುಖ್ಯಮಂತ್ರಿ ಮಾಣಿಕ್ ಸಹಾ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರಾಜೀವ್ ಭಟ್ಟಾಚಾರ್ಯ ಅವರನ್ನು ಅಭಿನಂದಿಸುತ್ತೇನೆ ಎಂದು ಅಮಿತ್ ಶಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿಗೆ ಹಾಕಿದ್ದಕ್ಕಾಗಿ ತ್ರಿಪುರಾದ ಜನರಿಗೆ ಧನ್ಯವಾದ ಸಲ್ಲಿಸುತ್ತೇನೆ. ಈ ಗೆಲುವು ಪ್ರಧಾನಿ ಮೋದಿ ಅವರ ವಿಕಸಿತ ಭಾರತ-2047 ಎಂಬ ಪರಿಕಲ್ಪನೆಯಡಿ ತ್ರಿಪುರಾದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಆಡಳಿತದಲ್ಲಿ ನಕ್ಸಲಸಿಂ ಕೊನೆಯುಸಿರೆಳೆಯುತ್ತಿದೆ: ಅಮಿತ್ ಶಾ

ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ: ಸಿಎಂ ಸಿದ್ದರಾಮಯ್ಯ ಹೀಗ್ಯಾಕೆ ಅಂದಿದ್ದು

ದೋಣಿಯೊಳಗೆ ಹಾರಿ ಬಂದು ದೊಡ್ಡ ಮೀನು ಚುಚ್ಚಿ ಮೀನುಗಾರಿಕೆಗೆ ತೆರಳಿದ್ದ ಯುವಕ ಸಾವು

ಒನ್ ಸೈಡ್ ಲವ್‌ಗೆ ನೋ ಎಂದ ವಿದ್ಯಾರ್ಥಿನಿಯನ್ನೇ ಮುಗಿಸಿದ ಪ್ರಿಯಕರ

ಆರ್‌ಎಸ್‌ಎಸ್‌ ದೊಡ್ಡ ವೃಕ್ಷವಾಗಿದ್ದು ಯಾರಿಂದಲೂ ಏನೂ ಮಾಡಲು ಸಾಧ್ಯವಿಲ್ಲ: ಶೋಭ ಕರಂದ್ಲಾಜೆ

ಮುಂದಿನ ಸುದ್ದಿ
Show comments