Webdunia - Bharat's app for daily news and videos

Install App

ಬಿಹಾರ: ಕೊನೆಯ ಹಂತದ ಮತದಾನ

Webdunia
ಗುರುವಾರ, 5 ನವೆಂಬರ್ 2015 (09:39 IST)
ಪ್ರಧಾನಿ ಮೋದಿ ಮತ್ತು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ನಡುವಿನ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿರುವ ಬಿಹಾರ್ ವಿಧಾನಸಭೆಗೆ ಇಂದು ಐದನೆಯ ಮತ್ತು ಕೊನೆಯ ಹಂತದ ಮತದಾನ ನಡೆಯುತ್ತಿದೆ.

ಒಟ್ಟು 57 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಜೆಡಿ-ಯು ಪಕ್ಷದ ಹಿರಿಯ ಸಚಿವ ಬಿಜೇಂದ್ರ ಪ್ರಸಾದ್ ಯಾದವ್ ಮತ್ತು ಆರ್‌ಜೆಡಿಯ ಪ್ರಮುಖ ನಾಯಕ ಅಬ್ದುಲ್ ಬಾರಿ ಸಿದ್ದಿಕಿ ಅದೃಷ್ಟ ಇಂದು ಮತಪೆಟ್ಟಿಗೆಯನ್ನು ಸೇರಲಿದೆ.
 
57 ಕ್ಷೇತ್ರಗಳಲ್ಲಿ 24 ಕ್ಷೇತ್ರಗಳು ಪಶ್ಚಿಮ ಬಂಗಾಳದ ಗಡಿಗಂಟಿಕೊಂಡಿರುವ ಸೀಮಾಂಚಲ ವಿಭಾಗಕ್ಕೆ ಸೇರಿದ್ದು, ಜತೆಗೆ ಮಧುಬನಿ, ದರ್ಭಾಂಗ, ಮಾಧೇಪುರ, ಸಹರ್ಸಾ, ಸುಪೌಲ್, ಅರರಿಯಾ, ಕಿಸಾನಗಂಜ್, ಪುರ್ನಿಯಾ ಮತ್ತು ಕತಿಹಾರ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಸೂಕ್ಷ್ಮ ಹಾಗೂ ಅತಿಸೂಕ್ಷ್ಮ ಮತಗಟ್ಟೆಗಳಿಗೆ ಭಾರಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದ್ದು, ಉಳಿದಂತೆ ಮತಗಟ್ಟೆಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.
 
ಒಟ್ಟು 1,55,43,594 ಜನರು ಮತದಾನದ ಹಕ್ಕನ್ನು ಹೊಂದಿದ್ದು 58 ಮಹಿಳೆಯರು ಸೇರಿದಂತೆ 827 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 
 
ಜೆಡಿ-ಯು ಪಕ್ಷದ ಹಿರಿಯ ಸಚಿವ ಬಿಜೇಂದ್ರ ಪ್ರಸಾದ್ ಯಾದವ್ ಮತ್ತು ಆರ್‌ಜೆಡಿಯ ಅಬ್ದುಲ್ ಬಾರಿ ಸಿದ್ದಿಕಿ, ಸಚಿವ ನರೇಂದ್ರ ನಾರಾಯಣ ಯಾದವ್ ಮತ್ತು ಲಾಲು ಪ್ರಸಾದ್ ಅವರ ನಿಕಟವರ್ತಿ ಭೋಲಾ ಯಾದವ್ ಇಂದು ನಡೆಯುತ್ತಿರರುವ ಚುನಾವಣೆಯ ಪ್ರಮುಖ ಸ್ಪರ್ಧಿಗಳಾಗಿದ್ದಾರೆ. 
 
57 ಕ್ಷೇತ್ರಗಳ ಪೈಕಿ 3 ಕ್ಷೇತ್ರಗಳು ನಕ್ಸಲ್ ಪೀಡಿತ ಪ್ರದೇಶಗಳಾಗಿರುವ ಹಿನ್ನಲೆಯಲ್ಲಿ ಅಲ್ಲಿ ಬೆಳಗ್ಗೆ 7ರಿಂದ ಮಧ್ಯಾಹ್ನ 3ರವರೆಗೆ ಹಾಗೂ ಉಳಿದ ಕ್ಷೇತ್ರಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments