ಅಪ್ರಾಪ್ತ ಬಾಲಕಿಯೊಂದಿಗಿನ ಬಿಜೆಪಿ ಶಾಸಕನ ''ಕಿಸ್' ಕಹಾನಿ

Webdunia
ಭಾನುವಾರ, 24 ಜುಲೈ 2016 (11:16 IST)
ರೈಲಿನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಹಾರ್‌ನ ಸಿವಾನ್ ವಿಧಾನಸಭಾ ಕ್ಷೇತ್ರದ ಶಾಸಕ ತುನ್ನಾ ಪಾಂಡೆಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
 
ಹಾಜಿಪುರ್- ಮುಜಾಫರ್‌ಪುರ್ ರೈಲು ನಿಲ್ದಾಣಗಳ ಮಧ್ಯೆ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
 
ಪುತ್ರಿ ಮಲಗಿದ್ದಾಗ ಆಕೆಯ ಮೇಲೆ ಬಿಜೆಪಿ ಶಾಸಕ ಪಾಂಡೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೋಷಕರು ದೂರು ನೀಡಿದ ಹಿನ್ನೆಲೆಯಲ್ಲಿ ಶಾಸಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ರೈಲ್ವೆ ಪೊಲೀಸ್ ಅಧಿಕಾರಿ ಸಂಜಯ್ ಸಿಂಗ್ ತಿಳಿಸಿದ್ದಾರೆ. 
 
ಬಾಲಕಿ ಮಲಗಿದ್ದಾಗ ಆಕೆಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಲ್ಲದೇ ಆಕೆಯನ್ನು ಬಾಥ್‌ರೂಮ್‌ಗೆ ಕರೆದುಕೊಂಡು ಹೋಗುವ ಪ್ರಯತ್ನ ಕೂಡಾ ಮಾಡಿದ್ದಾನೆ. ಆರೋಪಿ ಶಾಸಕನ ವಿರುದ್ಧ ಎಫ್ಐಆರ್ ದಾಖಲಿಸಿ ಆತನನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 
12 ವರ್ಷದ ಬಾಲಕಿ ತನ್ನ ಪೋಷಕರೊಂದಿಗೆ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಕೋಲ್ಕತಾದಿಂದ ಗೋರಖ್‌ಪುರ್‌ಗೆ ಪ್ರಯಾಣಿಸುತ್ತಿದ್ದಳು. ಶಾಸಕ ಪಾಂಡೆ ತನ್ನ ಗುಪ್ತಾಂಗ ಹಾಗೂ ಎದೆಯ ಭಾಗದ ಮೇಲೆ ಕೈಯಾಡಿಸಿದ್ದಲ್ಲದೇ ಒತ್ತಾಯಪೂರ್ವಕವಾಗಿ ಕಿಸ್ ಮಾಡಲು ಪ್ರಯತ್ನಿಸಿದ್ದಾನೆ ಎಂದು ಬಾಲಕಿ ದೂರಿದ್ದಾಳೆ.
 
ನನ್ನನ್ನು ಭಾಥ್‌ರೂಮ್‌ವರೆಗೆ ಬರುವಂತೆ ಒತ್ತಾಯಿಸಿದ್ದಾನೆ. ಆತನ ವರ್ತನೆಯಿಂದ ಭಯಗೊಂಡ ಬಾಲಕಿ ಜೋರಾಗಿ ಕೂಗಿಕೊಂಡು ಪೋಷಕರಿಗೆ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸ್ ಅಧಿಕಾರಿ ಸಂಜಯ್ ಸಿಂಗ್ ತಿಳಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ