ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ: ದಾಖಲೆಯ 10ನೇ ಬಾರಿ ಗದ್ದುಗೇರಲು ಮುಹೂರ್ತ ಫಿಕ್ಸ್‌

Sampriya
ಸೋಮವಾರ, 17 ನವೆಂಬರ್ 2025 (15:49 IST)
Photo Credit X
ಪಾಟ್ನಾ:  ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬೆನ್ನಲ್ಲೇ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ,  ದಾಖಲೆಯ ಹತ್ತನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧತೆ ನಡೆಸುತ್ತಿದ್ದಾರೆ. 

ಬಿಹಾರದ ಮುಖ್ಯಮಂತ್ರಿ ಆಗಲು ಎನ್‌ಡಿಎ ಮಿತ್ರಪಕ್ಷಗಳ ಬೆಂಬಲ ಹೊಂದಿರುವ ನಿತೀಶ್ ಕುಮಾರ್ ಇಂದು ಕೊನೆಯ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಪುಟ ವಿಸರ್ಜನೆ ಮಾಡುವ ನಿರ್ಧಾರ ಅಂಗೀಕರಿಸಿದರು.. ನಂತರ ತಮ್ಮ ರಾಜೀನಾಮೆಯನ್ನು ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಸಲ್ಲಿಸಿದ್ದಾರೆ.

ಎನ್‌ಡಿಎ ಸರ್ಕಾರ ನವೆಂಬರ್ 20ರಂದು ಪಾಟ್ನಾದ ಐತಿಹಾಸಿಕ ಗಾಂಧಿ ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದೆ. ಬಿಹಾರದಲ್ಲಿ ನೂತನ ಎನ್‌ಡಿಎ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗುತ್ತಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. 

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎಲ್‌ಡಿಎ ಮೈತ್ರಿಕೂಟ 202 ಸ್ಥಾನಗಳನ್ನು ಗಳಿಸಿತು. ಬಿಜೆಪಿ 89 ಸ್ಥಾನ ಪಡೆಯುವುದರೊಂದಿಗೆ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಜೆಡಿಯು 85, ಎಲ್ ಜೆಪಿ 19 ಜಯ ಸಾಧಿಸಿದೆ. ಕಾಂಗ್ರೆಸ್, ಆರ್ ಜೆಡಿ ಹಾಗೂ ಮೂರು ಎಡ ಪಕ್ಷಗಳನ್ನು ಒಳಗೊಂಡಿರುವ ಮಹಾಘಟಬಂಧನ್ 35 ಸ್ಥಾನ ಗಡಿಯನ್ನು ದಾಟಲು ಪರದಾಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ನಿತೀಶ್ ಕುಮಾರ್ ಇಂದು 10 ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ: ಯಾರೆಲ್ಲಾ ಭಾಗಿಯಾಗಲಿದ್ದಾರೆ

ಮುಂದಿನ ಸುದ್ದಿ
Show comments