Webdunia - Bharat's app for daily news and videos

Install App

ಚುನಾವಣೆ ಹತ್ತಿರವಾಗುತ್ತಿದ್ದಂತೆ ಪ್ರತಿ ಮನೆಗೆ ಉಚಿತ ವಿದ್ಯುತ್ ಘೋಷಿಸಿದ ಬಿಹಾರ ಸಿಎಂ ನಿತೀಶ್‌

Sampriya
ಗುರುವಾರ, 17 ಜುಲೈ 2025 (14:16 IST)
Photo Credit X
ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇದೆ. ಈ ಮಧ್ಯೆ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯದ ಮತದಾರರನ್ನು ಸೆಳೆಯಲು ದೊಡ್ಡ ಘೋಷಣೆ ಮಾಡಿದ್ದಾರೆ.

ಇದೇ ಆಗಸ್ಟ್ 1ರಿಂದ ರಾಜ್ಯದ ಎಲ್ಲ ಗೃಹ ಬಳಕೆದಾರರಿಗೆ 125 ಯೂನಿಟ್‌ಗಳವರೆಗಿನ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ನಿತೀಶ್‌ ಕುಮಾರ್‌ ಘೋಷಿಸಿದ್ದಾರೆ. 

ನಾವು ಆರಂಭದಿಂದಲೂ ಕೈಗೆಟುಕುವ ದರದಲ್ಲಿ ಎಲ್ಲರಿಗೂ ವಿದ್ಯುತ್ ಒದಗಿಸುತ್ತಿದ್ದೇವೆ. ಇದೀಗ ರಾಜ್ಯದ ಎಲ್ಲ ಗೃಹ ಬಳಕೆದಾರರಿಗೆ 125 ಯೂನಿಟ್‌ಗಳವರೆಗಿನ ವಿದ್ಯುತ್‌ಗೆ ಯಾವುದೇ ಶುಲ್ಕ ಇರುವುದಿಲ್ಲ ಎಂದು ಬರೆದಿದ್ದಾರೆ. ಈ ಯೋಜನೆಯಿಂದ ರಾಜ್ಯದ 1.67 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗಲಿದೆ ಎಂದು ನಿತೀಶ್‌ ಕುಮಾರ್‌ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಈ ಘೋಷಣೆಗೆ ಮುನ್ನ ಮಂಗಳವಾರ ನಿತೀಶ್ ಕುಮಾರ್ 30 ಪ್ರಮುಖ ಪ್ರಸ್ತಾಪಗಳಿಗೆ ಅನುಮೋದನೆ ನೀಡಿದ್ದರು, ಇದರಲ್ಲಿ ಮುಂದಿನ ಐದು ವರ್ಷಗಳಲ್ಲಿ ಒಂದು ಕೋಟಿ ಯುವಕರಿಗೆ ಉದ್ಯೋಗ ಒದಗಿಸುವ ಯೋಜನೆಯೂ ಸೇರಿದೆ. ಈ ವರ್ಷಾಂತ್ಯದಲ್ಲಿ ನಡೆಯಲಿರುವ ರಾಜ್ಯ ಚುನಾವಣೆಗೆ ಮುಂಚಿತವಾಗಿ ಪ್ರಮುಖ ನಿರ್ಧಾರಗಳನ್ನು ಆಢಳಿತರೂಢ ಎನ್‌ಡಿಎ ತೆಗೆದುಕೊಳ್ಳುತ್ತಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ರಾಪ್ತ ಮಗಳ ಮೇಲೆ ಮೂರು ವರ್ಷ ಲೈಂಗಿಕ ದೌರ್ಜನ್ಯ: ಪಾಪಿ ಅಪ್ಪನಿಗೆ ಜೀವಾವಧಿ ಶಿಕ್ಷೆ

ಯೋಗಿ ಸಿಎಂ ಆದ್ಮೇಲೆ ಯುಪಿಯಲ್ಲಿ 15 ಸಾವಿರ ಎನ್‌ಕೌಂಟರ್‌, 30 ಸಾವಿರ ಕ್ರಿಮಿನಲ್‌ಗಳ ಅರೆಸ್ಟ್‌

ಜಮೀನು ಒತ್ತುವರಿ ಪ್ರಕರಣ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್ ರಿಲೀಫ್‌

ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳ ಡಿಎನ್‌ಎ ಟೆಸ್ಟ್‌ಗೆ ಮುಂದಾದ ಪಂಜಾಬ್ ಸರ್ಕಾರ

ಶುಭಾಂಶು ಶುಕ್ಲಾ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಇಸ್ರೋ

ಮುಂದಿನ ಸುದ್ದಿ
Show comments