Select Your Language

Notifications

webdunia
webdunia
webdunia
webdunia

ಉಪರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಬಿಹಾರ್ ಸಿಎಂ ನಿತೀಶ್ ಕುಮಾರ್

ಉಪರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ ಘೋಷಿಸಿದ ಬಿಹಾರ್ ಸಿಎಂ ನಿತೀಶ್ ಕುಮಾರ್
ಪಾಟ್ನಾ , ಗುರುವಾರ, 6 ಜುಲೈ 2017 (13:50 IST)
ಬಿಹಾರ್ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ, ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಮೈತ್ರಿಕೂಟವನ್ನು ಬೆಂಬಲಿಸಲು ನಿರ್ಧರಿಸಿದೆ ಎಂದು ಜೆಡಿಯು ಪಕ್ಷದ ವಕ್ತಾರ ಕೆ.ಸಿ.ತ್ಯಾಗಿ ಹೇಳಿದ್ದಾರೆ.  
 
ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾದ ರಾಮಾನಾಥ್ ಕೋವಿಂದ್ ಅವರನ್ನು ಬೆಂಬಲಿಸಿದ ನಿತೀಶ್ ಕುಮಾರ್, ಇದೀಗ ಉಲ್ಟಾ ಹೊಡೆದಿದ್ದಾರೆ.
 
ಬಿಹಾರ್‌ನಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಯು, ಆರ್‌ಜೆಡಿ, ಕಾಂಗ್ರೆಸ್ ಮಹಾಮೈತ್ರಿ ರಚಿಸಿಕೊಂಡು ಅಧಿಕಾರದ ಗದ್ದುಗೆ ಏರುವಲ್ಲಿ ಯಶಸ್ವಿಯಾಗಿದ್ದವು. ಇದೀಗ, ನಿತೀಶ್ ಕುಮಾರ್ ಎನ್‌ಡಿಎದತ್ತ ವಾಲುತ್ತಿರುವುದು ಮಿತ್ರಪಕ್ಷಗಳಲ್ಲಿ ಬಿಕ್ಕಟ್ಟು ಸೃಷ್ಟಿಸಿದೆ.
 
ನಿತೀಶ್ ಕುಮಾರ್ ವರ್ತನೆಯಿಂದ ಮಹಾಮೈತ್ರಿ ಒಡೆದುಹೋಗುವ ಸಾಧ್ಯತೆಗಳಿವೆ ಎನ್ನುವ ವರದಿಗಳು ಬಹಿರಂಗವಾಗುತ್ತಿದ್ದಂತೆ  ಜೆಡಿಯು ಪಕ್ಷ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಮೈತ್ರಿಕೂಟವನ್ನು ಬೆಂಬಲಿಸುವುದಾಗಿ ಘೋಷಿಸಿದೆ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನಡುರಸ್ತೆಯಲ್ಲೇ ಕಚ್ಚಾಡಿಕೊಂಡ ಬಿಜೆಪಿ ನಾಯಕರು