Select Your Language

Notifications

webdunia
webdunia
webdunia
webdunia

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ

Sushil Kumar Modi

Krishnaveni K

ಪಾಟ್ನಾ , ಮಂಗಳವಾರ, 14 ಮೇ 2024 (09:09 IST)
ಪಾಟ್ನಾ: ಬಿಹಾರದ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ನಾಯಕ ಸುಶೀಲ್ ಕುಮಾರ್ ಮೋದಿ ಕ್ಯಾನ್ಸರ್ ನಿಂದಾಗಿ ಸಾವನ್ನಪ್ಪಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು.

ಬಿಹಾರದ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಈ ವಿಚಾರವನ್ನು ಟ್ವೀಟ್ ಮಾಡಿ ತಿಳಿಸಿದ್ದಾರೆ. ಕಳೆದ 6 ತಿಂಗಳಿನಿಂದ ಸುಶೀಲ್ ಕುಮಾರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಅವರೇ ಹೇಳಿಕೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

1952 ರಲ್ಲಿ ಪಾಟ್ನಾದಲ್ಲಿ ಜನಿಸಿದ್ದ ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಸಸ್ಯಶಾಸ್ತ್ರದಲ್ಲಿ ಪದವೀಧರರಾಗಿದ್ದ ಸುಶೀಲ್ ಕುಮಾರ್ ಮೋದಿ 1990 ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. ಇದಾದ ಬಳಿಕ ಸತತ ಮೂರು ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2005 ರಿಂದ 2013 ರವರೆಗೆ ಮತ್ತು 2017 ರಿಂದ 2020 ರವರೆಗೆ ಎರಡು ಅವಧಿಗೆ ಬಿಹಾರದ ಉಪಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು.

ಇದಲ್ಲದೆ ಲೋಕಸಭೆ ಸಂಸದ, ರಾಜ್ಯಸಭಾ ಸಂಸದರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ ಪಕ್ಷದಲ್ಲಿ ವಿವಿಧ ಜವಾಬ್ಧಾರಿಗಳನ್ನು ಹೊತ್ತುಕೊಂಡಿದ್ದರು. ಅವರ ನಿಧನ ಬಿಜೆಪಿಗೆ ತುಂಬಲಾರದ ನಷ್ಟವಾಗಿದೆ ಎಂದು ಸಾಮ್ರಾಟ್ ಚೌಧರಿ ಬಣ್ಣಿಸಿದ್ದಾರೆ. ಸುಶೀಲ್ ನಿಧನಕ್ಕೆ ರಾಜಕೀಯ ಗಣ್ಯರು, ಸಾರ್ವಜನಿಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಶುಭ ಗಳಿಗೆಯಲ್ಲಿ ವಾರಣಾಸಿಯಲ್ಲಿ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ