Webdunia - Bharat's app for daily news and videos

Install App

ಅಪ್ರಾಪ್ತಳ ಮೇಲೆ ನಾಲ್ಕು ಮಂದಿ ಆರೋಪಿಗಳಿಂದ ಗ್ಯಾಂಗ್‌ರೇಪ್

Webdunia
ಸೋಮವಾರ, 6 ಜುಲೈ 2015 (20:01 IST)
ನಾಲ್ಕು ಮಂದಿ ಆರೋಪಿಗಳು ಅಪ್ರಾಪ್ತಳ ಮೇಲೆ ಗ್ಯಾಂಗ್‌ರೇಪ್ ಎಸಗಿದ್ದರೆ, ಮತ್ತೊಂದು ಪ್ರತ್ಯೇಕ ಪ್ರಕರಣದಲ್ಲಿ 5 ವರ್ಷದ ಬಾಲೆಯ ಮೇಲೆ ಹದಿಹರೆಯದ ಯವಕನೊಬ್ಬ ಅತ್ಯಾಚಾರವೆಸಗಿದ್ದಾನೆ.  
 
ಇಂದು ಬೆಳಿಗ್ಗೆ ಹೊಲದ ಕೆಲಸಕ್ಕಾಗಿ ತೆರಳುತ್ತಿದ್ದ 14 ವರ್ಷದ ಅಪ್ರಾಪ್ತಳನ್ನು ನಾಲ್ಕು ಮಂದಿ ಯುವಕರು ಅಪಹರಿಸಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಗ್ಯಾಂಗ್‌ರೇಪ್ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.   
 
ಅರೆಪ್ರಜ್ಞಾವಸ್ಥ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಪ್ರಾಪ್ತಳನ್ನು ಕಂಡ ಗ್ರಾಮಸ್ಥರು ಬಾಲಕಿಯ ಕುಟುಂಬದ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪುತ್ರಿಯ ಸ್ಥಿತಿ ಕಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
 
ಅಪ್ರಾಪ್ತಳ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳನ್ನು ಗುರುತಿಸಲಾಗಿದ್ದು, ಅವರ ನಿವಾಸಗಳ ಮೇಲೆ ರೈಡ್ ಮಾಡಲಾಗಿದೆ. ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಮತ್ತೊಂದು ಪ್ರಕರಣದಲ್ಲಿ ಐದು ವರ್ಷ ವಯಸ್ಸಿನ ಬಾಲೆಯ ಮೇಲೆ 17 ವರ್ಷ ವಯಸ್ಸಿನ ಹದಿಹರೆಯದ ಯುವಕನೊಬ್ಬ ಅತ್ಯಾಚಾರವೆಸಗಿದ ಘಟನೆ ವರದಿಯಾಗಿದೆ. ಆರೋಪಿ ರಾಣಾ ಚಾಂದ್‌ನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿಲ್‌ನವಾಜ್ ಅಹ್ಮದ್ ತಿಳಿಸಿದ್ದಾರೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments