Publish Date: Tue, 31 Mar 2026 (12:28 IST)
Updated Date: Tue, 31 Mar 2026 (12:32 IST)
ಪಾಟ್ನಾ: ಬಿಹಾರದ ನಳಂದ ಜಿಲ್ಲೆಯ ಶಿಟ್ಲಾ ಮಾತಾ ಮಂದಿರದಲ್ಲಿ ಕಾಲ್ತುಳಿತ ಸಂಭವಿಸಿದ್ದು 8 ಮಂದಿ ಸಾವನ್ನಪ್ಪಿ ಹಲವರಿಗೆ ಗಾಯಗಳಾಗಿರುವ ವರದಿಯಾಗಿದೆ.
ಮೃತರೆಲ್ಲರೂ ಮಹಿಳೆಯರು ಎಂದು ತಿಳಿದುಬಂದಿದೆ. ಘಟನೆಯಲ್ಲಿ 12 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ನಳಂದ ಜಿಲ್ಲೆಯ ಬಿಹಾರ ಶರೀಫ್ ನಿಂದ ಸುಮಾರು 5 ಕಿ.ಮೀ. ದೂರದಲ್ಲಿರುವ ಮಾಘ್ರಾ ಗ್ರಾಮದಲ್ಲಿನ ಶೀತಲಾದೇವಿ ದೇವಾಲಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾಗ ಘಟನೆ ಸಂಭವಿಸಿದೆ.
ಇಂದು ಚೈತ್ರ ಮಾಸದ ಕೊನೆಯ ಮಂಗಳವಾರವಾಗಿದ್ದರಿಂದ ವಿಶೇಷ ದಿನವಾಗಿತ್ತು. ಈ ಹಿನ್ನಲೆಯಲ್ಲಿ ಸಾಕಷ್ಟು ಭಕ್ತರು ಅದರಲ್ಲೂ ವಿಶೇಷವಾಗಿ ಮಹಿಳೆಯರು ದೇವಿಯ ಪೂಜೆ ಮಾಡಲು ಬಂದಿದ್ದರು. ಈ ವೇಳೆ ನೂಕುನುಗ್ಗಲು ಉಂಟಾಗಿದ್ದು ಕಾಲ್ತುಳಿತ ಸಂಭವಿಸಿದೆ.
ಗ್ರಾಮಸ್ಥರೊಂದಿಗೆ ಪೊಲೀಸರು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.