Select Your Language

Notifications

webdunia
webdunia
webdunia
webdunia

9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ!

9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆ!
ಜಾರ್ಖಂಡ್ , ಭಾನುವಾರ, 20 ಆಗಸ್ಟ್ 2023 (08:54 IST)
ಜಾರ್ಖಂಡ್ನಲ್ಲಿ 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ. ಇಲ್ಲಿನ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ ಎಂದು ಹಿರಿಯ ವೈದ್ಯರು ತಿಳಿಸಿದ್ದಾರೆ.
 
ಜಾರ್ಖಂಡ್ನ ರಾಮಗಢ ಜಿಲ್ಲೆಯ ನಿವಾಸಿಯಾಗಿರುವ ಮಗುವನ್ನು ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆಯ ಲಕ್ಷಣಗಳೊಂದಿಗೆ ರಿಮ್ಸ್ಗೆ ದಾಖಲಿಸಲಾಗಿದೆ.

ಮಗುವಿನ ಮೂಗಿನ ಸ್ವ್ಯಾಬ್ ಅನ್ನು ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ವಿಭಾಗಕ್ಕೆ ಕಳುಹಿಸಲಾಗಿದ್ದು, ಹಕ್ಕಿಜ್ವರ ದೃಢಪಟ್ಟಿದೆ ಎಂದು ಮಕ್ಕಳ ವಿಭಾಗದ ಡಾ.ರಾಜೀವ್ ಮಿಶ್ರಾ ತಿಳಿಸಿದ್ದಾರೆ.

ಇದು ಆಸ್ಪತ್ರೆಯಲ್ಲಿ ವರ್ಷದ ಮೊದಲ ಹಕ್ಕಿ ಜ್ವರ ಪ್ರಕರಣವಾಗಿದೆ. ಮಗುವಿಗೆ ನನ್ನ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಕೋವಿಡ್ -19 ತರಹದ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ಮಗುವನ್ನು ಇತರರಿಂದ ಪ್ರತ್ಯೇಕಿಸಲಾಗಿದೆ ಎಂದು ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಪತಿಯನ್ನ ಸ್ನಾನಕ್ಕೆಂದು ಬಾತ್‌ರೂಮ್‌ಗೆ ಕಳಿಸಿ, ಪ್ರಿಯಕರನೊಂದಿಗೆ ಪತ್ನಿ ಎಸ್ಕೇಪ್!