Webdunia - Bharat's app for daily news and videos

Install App

ನಾಯಿ ಅಥವಾ ಮಂಗ ಕಚ್ಚಿದರೆ 2 ಲಕ್ಷ ಪರಿಹಾರ

Webdunia
ಭಾನುವಾರ, 12 ಏಪ್ರಿಲ್ 2015 (12:57 IST)
ಉತ್ತರಾಖಂಡ್ ಹೈಕೋರ್ಟ್ ಮಹತ್ವದ ತೀರ್ಪೊಂದನ್ನು ನೀಡಿದ್ದು ಕೋತಿ ಅಥವಾ ನಾಯಿ ದಾಳಿಗೆ ಸಿಲುಕಿದವರಿಗೆ ಸರ್ಕಾರ 2 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ಹೇಳಿದೆ. 

ಘಟನೆ ನಡೆದ ಒಂದೇ ವಾರದೊಳಗೆ ಜಿಲ್ಲಾ ಮುನ್ಸಿಪಲ್ ಕಾರ್ಪೋರೇಶನ್ ಮತ್ತು ಸರ್ಕಾರ ಸೇರಿ ಪೀಡಿತರಿಗೆ ಪರಿಹಾರವನ್ನು ಒದಗಿಸಬೇಕು ಎಂದು ನ್ಯಾಯಮೂರ್ತಿ ಅಲೋಕ್ ಸಿಂಗ್​ ಮತ್ತು ಸರ್ವೇಶ್ ಕುಮಾರ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠ ಆದೇಶ ನೀಡಿದೆ. 
 
ನಾಯಿ ಮತ್ತು ಕೋತಿ ದಾಳಿಗೆ ತುತ್ತಾದ ಜನ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಆದೇಶ ನೀಡಿದೆ. ನೈನಿತಾಲ್‌ನಲ್ಲ ಬೀದಿನಾಯಿಗಳ ಹಾವಳಿ ಬಹುದೊಡ್ಡ ಸಮಸ್ಯೆಯಾಗಿ ಕಾಡುತ್ತಿದ್ದು ಜನವರಿ ತಿಂಗಳೊಂದರಲ್ಲೇ 4000 ಮಂದಿಗೆ ನಾಯಿ ಕಡಿದ ವರದಿಯಾಗಿತ್ತು. 
 
ಬೀಡಾದಿ ದನಗಳ ದಾಳಿಗೊಳಗಾದವರಿಗೂ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರ್ಟ್ ಆದೇಶಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments