ಕಾಂಗ್ರೆಸ್ ಗೆ ಸೆಡ್ಡು ಹೊಡೆಯಲು ಬಿಜೆಪಿಯಿಂದಲೂ ಫ್ರೀ ಘೋಷಣೆ: ಈದ್, ಮೊಹರಂಗೆ ಫ್ರೀ ಸಿಲಿಂಡರ್

Krishnaveni K
ಸೋಮವಾರ, 23 ಸೆಪ್ಟಂಬರ್ 2024 (09:27 IST)
ನವದೆಹಲಿ: ಇಷ್ಟು ದಿನ ಹಲವು ರಾಜ್ಯಗಳ ಚುನಾವಣೆ ಸಂದರ್ಭದಲ್ಲಿ ಉಚಿತ ಘೋಷಣೆ ಮಾಡಿ ಜನರ ಮತ ಸೆಳೆಯುವಲ್ಲಿ ಯಶಸ್ವಿಯಾಗುತ್ತಿದ್ದ ಕಾಂಗ್ರೆಸ್ ಗೆ ಈಗ ಬಿಜೆಪಿಯೂ ಸೆಡ್ಡು ಹೊಡೆಯಲು ಮುಂದಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಯಲಿದ್ದು, ಈ ಬಾರಿ ಬಿಜೆಪಿ ಗೆದ್ದರೆ ಈದ್, ಮೊಹರಂ ಹಬ್ಬಕ್ಕೆ ಎರಡು ಸಿಲಿಂಡರ್ ಉಚಿತವಾಗಿ ನೀಡುವುದಾಗಿ ಗೃಹಸಚಿವ ಅಮಿತ್ ಶಾ ಘೋಷಿಸಿದ್ದಾರೆ. ಮೆಂಧಾರ್ ನಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಅಮಿತ್ ಶಾ ಈ ಘೋಷಣೆ ಮಾಡಿದ್ದಾರೆ.

ಉಚಿತ ಘೋಷಣೆಗಳ ಮೂಲಕ ಕಾಂಗ್ರೆಸ್ ಚುನಾವಣೆಗಳಲ್ಲಿ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಬಿಜೆಪಿಯೂ ಅದೇ ಹಾದಿ ಹಿಡಿದಿದೆ. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದು ಮಾಡಿದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಈ ಚುನಾವಣೆಯಲ್ಲಿ ಗೆಲ್ಲುವುದು ಬಿಜೆಪಿಗೂ ಪ್ರತಿಷ್ಠೆಯ ವಿಚಾರವಾಗಿದೆ. ಕಾಶ್ಮಿರದಲ್ಲಿ ಮುಸಲ್ಮಾನ ಧರ್ಮೀಯರ ಮತಗಳು ಹೆಚ್ಚಿದ್ದು ಈ ಕಾರಣಕ್ಕೆ ಈದ್ ಮತ್ತು ಮೊಹರಂ ಹಬ್ಬಕ್ಕೆ ಉಚಿತ ಸಿಲಿಂಡರ್ ನೀಡುವ ಘೋಷಣೆಯನ್ನು ಬಿಜೆಪಿ ಮಾಡಿರಬಹುದು ಎಂದು ಅಂದಾಜಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿ, ಇಲ್ಲಾಂದ್ರೆ ರಾಜೀನಾಮೆ ಕೊಡಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments