Webdunia - Bharat's app for daily news and videos

Install App

ತ್ರಿವಳಿ ತಲಾಕ್‌ಗೆ ವಿರೋಧ: ಟಿಎಂಸಿ ವಿರುದ್ಧ ಬಿಜೆಪಿ ವಾಗ್ದಾಳಿ

Webdunia
ಮಂಗಳವಾರ, 8 ನವೆಂಬರ್ 2016 (14:53 IST)
ಜಮಾತ್ ಉಲೆಮಾ-ಇ-ಹಿಂದ್ ಪರವಾಗಿ ನಿಂತು ತ್ರಿವಳಿ ತಲಾಕ್ ವಿರೋಧಿಸುತ್ತಿರುವ ತೃಣಮೂಲ ಕಾಂಗ್ರೆಸ್ ವಿರುದ್ಧ ಹರಿಹಾಯ್ದಿರುವ ಬಿಜೆಪಿ, ಪಶ್ಚಿಮ ಬಂಗಾಳದಲ್ಲಿನ 1.5ಕೋಟಿ ಮುಸ್ಲಿಂ ಮಹಿಳೆಯರನ್ನು ಪರಿಗಣಿಸದೇ ಮತಬ್ಯಾಂಕ್ ರಾಜಕಾರಣವನ್ನು ಮಾಡುತ್ತಿದೆ ಎಂದಿದೆ. 

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಆಕೆಯ ಸಚಿವರು ಮತಬ್ಯಾಂಕ್ ರಾಜಕೀಯಕ್ಕಾಗಿ ತ್ರಿವಳಿ ತಲಾಕ್‌ನ್ನು ಪ್ರೋತ್ಸಾಹಿಸುತ್ತಿದ್ದಾರೆ ಮತ್ತು ಅಲ್ಪಸಂಖ್ಯಾತ ಸಮುದಾಯದವರ ಭಾವನೆಗಳ ಜತೆ ಆಟವಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಲೊಕೇಶ್ ಚಟರ್ಜಿ ಹೇಳಿದ್ದಾರೆ. 
 
ಬಿಜೆಪಿ ಸಮಾನ ಹಕ್ಕುಗಳನ್ನು ಜಾರಿ ತರಲು ಪ್ರಯತ್ನಿಸಿದರೆ, ತಾವೊಬ್ಬ ಮಹಿಳೆಯಾದರೂ ಸಹ ಮಮತಾ ಬ್ಯಾನರ್ಜಿ, ರಾಜ್ಯದ 1.5 ಕೋಟಿ ಮುಸ್ಲಿಂ ಮಹಿಳೆಯರನ್ನು ಕತ್ತಲೆಗೆ ಎಳೆಯಲು ಮತ್ತು ಅನಿಶ್ಚಿತತೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.
 
ಪಶ್ಚಿಮ ಬಂಗಾಳ ವಿಭಾಗದ ಜಮಾತ್ ನಾಯಕರಾಗಿರುವ ಸಿದ್ದಿಕುಲ್ಲಾ ಚೌಧರಿ ಆಯೋಜಿಸಿದ್ದ ಮೆರವಣಿಗೆಗೆ ಟಿಎಂಸಿಯ ಇಬ್ಬರು ಹಿರಿಯ ಸಚಿವರನ್ನು ಕಳುಹಿಸಿರುವುದನ್ನು ಟೀಕಿಸಿದ ಚಟರ್ಜಿ ಅಂದು ಅವರು ಮಾಡಿದ ಭಾಷಣದ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದ್ದು, ಭಾಷಣದ ಕಂಟೆಂಟ್‌ನ್ನು ಸಹ ಕಳುಹಿಸಲಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments