Webdunia - Bharat's app for daily news and videos

Install App

ಬಿಜೆಪಿಯ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 97ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರಿಂದ ಶುಭಾಶಯ

Sampriya
ಶುಕ್ರವಾರ, 8 ನವೆಂಬರ್ 2024 (14:08 IST)
Photo Courtesy X
ನವದೆಹಲಿ: ಬಿಜೆಪಿಯ ಧುರೀಣ, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರಿಗೆ ಇಂದು 97ನೇ ಹುಟ್ಟುಹಬ್ಬದ ಸಂಭ್ರಮ. ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು, ಅಭಿಮಾನಿಗಳು ಶುಭ ಕೋರಿದ್ದು,  ಪಕ್ಷ ಮತ್ತು ದೇಶಕ್ಕೆ ಅಡ್ವಾಣಿ ಅವರ ಸೇವೆಯನ್ನು ಮುಖಂಡರು ಇದೇ ಸಂದರ್ಭದಲ್ಲಿ ಮೆಲುಕುಹಾಕಿದ್ದಾರೆ.

ಎಲ್.​ಕೆ.ಅಡ್ವಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇಶದ ಅತ್ಯಂತ ಮೆಚ್ಚುಗೆ ಪಡೆದ ರಾಜನೀತಿಜ್ಞರಲ್ಲಿ ಅಡ್ವಾಣಿ ಒಬ್ಬರು. ಬುದ್ಧಿವಂತಿಕೆ ಮತ್ತು ದೂರದೃಷ್ಟಿಯಿಂದಾಗಿ ಸದಾ ಅವರು ಗೌರವಿಸಲ್ಪಟ್ಟಿದ್ದಾರೆ. ಅವರ ಮಾರ್ಗದರ್ಶನವನ್ನು ಹಲವು ವರ್ಷಗಳಿಂದ ಪಡೆದಿರುವುದು ನನ್ನ ಅದೃಷ್ಟ. ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಅಡ್ವಾಣಿ ಅವರಿಗೆ ಈ ವರ್ಷ ಇನ್ನಷ್ಟು ವಿಶೇಷವಾಗಿದೆ. ಏಕೆಂದರೆ ಅವರು ದೇಶಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ದೇಶದ ಅತ್ಯಂತ ಮೆಚ್ಚುಗೆ ಪಡೆದ ರಾಜಕೀಯ ನಾಯಕರಲ್ಲಿ ಒಬ್ಬರಾದ ಅಡ್ವಾಣಿ ಅವರು ದೇಶದ ಅಭಿವೃದ್ಧಿಗಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಎಂದು ಮೋದಿ ಕೊಂಡಾಡಿದ್ದಾರೆ.

ಭಾರತ ರತ್ನ ಗೌರವಾನ್ವಿತ ಎಲ್‌.ಕೆ. ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು. ಅಡ್ವಾಣಿ ಅವರು ಸಾರ್ವಜನಿಕ ಸೇವೆ ಮತ್ತು ಸಂಘಟನಾ ಕೌಶಲ್ಯದ ವಿಶಿಷ್ಟ ಉದಾಹರಣೆ ನೀಡುವ ಮೂಲಕ ಬಿಜೆಪಿಯನ್ನು ಸಾರ್ವಜನಿಕ ಕಲ್ಯಾಣದ ಸಂಕೇತವಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ನಾಯಕತ್ವದಲ್ಲಿ ಬಿಜೆಪಿಯ ಸಂಘಟನೆ ಬಲಿಷ್ಠವಾಯಿತು ಎಂದು ಗೃಹ ಸಚಿವ ಅಮಿತ್ ಶಾ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಭಾರತೀಯ ರಾಜಕೀಯದ ಆಧಾರ ಸ್ತಂಭ ಮತ್ತು ನಮ್ಮೆಲ್ಲರಿಗೂ ಸ್ಫೂರ್ತಿಯ ಮೂಲವಾಗಿರುವ ಎಲ್.ಕೆ.ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು. ಸಾರ್ವಜನಿಕ ಜೀವನದಲ್ಲಿ ಅವರು ಅನೇಕ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಎಂದು ರಕ್ಷಣಾ ಸಚಿವ ರಾಜನಾಥ ಸಿಂಗ್ ಪೋಸ್ಟ್ ಮಾಡಿದ್ದಾರೆ.

ಅಡ್ವಾಣಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಶುಭಾಶಯ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments