ನವದೆಹಲಿ: ಭಾರತೀಯ ಜನತಾ ಪಕ್ಷದ ಭೀಷ್ಮ ಖ್ಯಾತಿಯ ಎಲ್.ಕೆ. ಅಡ್ವಾಣಿ ಅವರು 98ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಮಾಜಿ ಉಪ ಪ್ರಧಾನಿ ಎಅಡ್ವಾಣಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ.
ಅಡ್ವಾಣಿಯವರು ಒಬ್ಬ ಮೇಧಾವಿ ರಾಜಕಾರಣಿ. ಅವರ ಜೀವನ ಭಾರತದ ಪ್ರಗತಿಗಾಗಿ ಸಮರ್ಪಿತವಾಗಿದೆ. ದೇಶಕ್ಕಾಗಿ ಅವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ ಎಂದು ಅವರ ಸೇವೆಯನ್ನು ಸ್ಮರಿಸಿದ್ದಾರೆ ಎಂದು ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಮಾಜಿ ಉಪಪ್ರಧಾನಿ ಅಡ್ವಾಣಿ ಅವರ ಕೊಡುಗೆಗಳು ಭಾರತದ ಪ್ರಜಾಪ್ರಭುತ್ವ ಮತ್ತು ಸಾಂಸ್ಕೃತಿಕ ಕೇತ್ರದಲ್ಲಿ ಅಳಿಸಲಾಗದ ಗುರುತನ್ನು ಉಳಿಸಿವೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಮೋದಿ ಹಾರೈಸಿದ್ದಾರೆ.
ಮಾಜಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು, ಅಡ್ವಾಣಿಯವರ ಮನೆಗೆ ತೆರಳಿ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ದೇಶಭಕ್ತಿ, ಶಿಸ್ತು, ಸಮರ್ಪಣೆ ಮತ್ತು ದೃಢಸಂಕಲ್ಪದ ವಿಷಯದಲ್ಲಿ ಅಡ್ವಾಣಿ ಅವರು ಯುವಕರಿಗೆ ಒಂದು ಮಾದರಿಯಾಗಿದ್ದಾರೆ. ದೇವರು ಅವರಿಗೆ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಬರೆದುಕೊಂಡಿದ್ದಾರೆ.
ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್, ಕೇಂದ್ರ ಸಚಿವರು, ಬಿಜೆಪಿ ನಾಯಕರು ಅಡ್ವಾಣಿ ಅವರಿಗೆ ಶುಭಾಶಯ ಕೋರಿದ್ದಾರೆ.