ಬಿಜೆಪಿ ಭೀಷ್ಮ ಎಲ್‌.ಕೆ. ಅಡ್ವಾಣಿಗೆ 98ನೇ ಜನ್ಮದಿನದ ಸಂಭ್ರಮ: ಮೋದಿ ಸೇರಿ ಗಣ್ಯರ ಶುಭಾಶಯ

Sampriya
ಶನಿವಾರ, 8 ನವೆಂಬರ್ 2025 (14:16 IST)
Photo Credit X
ನವದೆಹಲಿ: ಭಾರತೀಯ ಜನತಾ ಪಕ್ಷದ ಭೀಷ್ಮ ಖ್ಯಾತಿಯ ಎಲ್‌.ಕೆ. ಅಡ್ವಾಣಿ ಅವರು 98ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಮಾಜಿ ಉಪ ಪ್ರಧಾನಿ ಎಅಡ್ವಾಣಿ  ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಶುಭ ಕೋರಿದ್ದಾರೆ.

ಅಡ್ವಾಣಿಯವರು ಒಬ್ಬ ಮೇಧಾವಿ ರಾಜಕಾರಣಿ. ಅವರ ಜೀವನ ಭಾರತದ ಪ್ರಗತಿಗಾಗಿ ಸಮರ್ಪಿತವಾಗಿದೆ. ದೇಶಕ್ಕಾಗಿ ಅವರು ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ ಎಂದು ಅವರ ಸೇವೆಯನ್ನು ಸ್ಮರಿಸಿದ್ದಾರೆ ಎಂದು ಮೋದಿ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. 

ಮಾಜಿ ಉಪಪ್ರಧಾನಿ ಅಡ್ವಾಣಿ ಅವರ ಕೊಡುಗೆಗಳು ಭಾರತದ ಪ್ರಜಾಪ್ರಭುತ್ವ ಮತ್ತು ಸಾಂಸ್ಕೃತಿಕ ಕೇತ್ರದಲ್ಲಿ ಅಳಿಸಲಾಗದ ಗುರುತನ್ನು ಉಳಿಸಿವೆ. ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಮೋದಿ ಹಾರೈಸಿದ್ದಾರೆ.

ಮಾಜಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು, ಅಡ್ವಾಣಿಯವರ ಮನೆಗೆ ತೆರಳಿ ಹುಟ್ಟು ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ದೇಶಭಕ್ತಿ, ಶಿಸ್ತು, ಸಮರ್ಪಣೆ ಮತ್ತು ದೃಢಸಂಕಲ್ಪದ ವಿಷಯದಲ್ಲಿ ಅಡ್ವಾಣಿ ಅವರು ಯುವಕರಿಗೆ ಒಂದು ಮಾದರಿಯಾಗಿದ್ದಾರೆ. ದೇವರು ಅವರಿಗೆ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಬರೆದುಕೊಂಡಿದ್ದಾರೆ.

ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌, ಕೇಂದ್ರ ಸಚಿವರು, ಬಿಜೆಪಿ ನಾಯಕರು ಅಡ್ವಾಣಿ ಅವರಿಗೆ ಶುಭಾಶಯ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ಮುಂದಿನ ಸುದ್ದಿ
Show comments