ಎರಡೂ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ: ಸಿಎಂ

Webdunia
ಭಾನುವಾರ, 3 ಅಕ್ಟೋಬರ್ 2021 (09:31 IST)
ಬೆಂಗಳೂರು : ಹಾನಗಲ್ ಮತ್ತು ಸಿಂದಗಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಅತ್ಯಧಿಕ ಮತಗಳಿಂದ ಜಯ ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶನಿವಾರ ಸದಾಶಿವ ನಗರದಲ್ಲಿ ಮಾತನಾಡಿದ ಅವರು, ಎರಡು ಉಪಚುನಾವಣೆಗೂ ಪಕ್ಷದಿಂದ ಬಹಳಷ್ಟು ಸಿದ್ಧತೆ ಮಾಡಿಕೊಂಡಿದ್ದೇವೆ. ಎರಡು ಕ್ಷೇತ್ರದಲ್ಲೂ ಪ್ರತ್ಯೇಕ ಸಭೆ ನಡೆದಿದೆ. ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಸೋಮವಾರ(ಅಕ್ಟೋಬರ್-3) ನಡೆಯಲಿರುವ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಕೇಂದ್ರಕ್ಕೆ ಸಲ್ಲಿಸಲಿದ್ದೇವೆ. ಅಲ್ಲಿಂದಲೇ ಅಂತಿಮ ಹೆಸರು ಘೋಷಣೆಯಾಗಲಿದೆ ಎಂದು ತಿಳಿಸಿದರು.
ಬೂತ್ ಮಟ್ಟದಿಂದಲೇ ಕಾರ್ಯಾ ಆರಂಭವಾಗಿದೆ. ಸದ್ಯದ ವಾತಾವರಣದಂತೆ ಬಿಜೆಪಿ ಅಭ್ಯರ್ಥಿಗಳು ಎರಡೂ ಕ್ಷೇತ್ರದಲ್ಲೂ ಅತ್ಯಧಿಕ ಮತಗಳ ಅಂತರದಿಂದ ಜಯ ಸಾಧಿಸಲಿದ್ದಾರೆ. ಕಾರ್ಯಕರ್ತರ ಸಭೆಯೂ ನಡೆದಿದೆ. ಎರಡು ಕ್ಷೇತ್ರಕ್ಕೂ ಪ್ರತ್ಯೇಕ ಉಸ್ತುವಾರಿಗಳ ನೇಮಕವೂ ನಡೆಯಲಿದೆ ಎಂದು ವಿವರ ನೀಡಿದರು.
ಇತ್ತೀಚೆಗೆ ಆತ್ಮಹತ್ಯೆ ಹೆಚ್ಚುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದೊಂದು ನಿಜಕ್ಕೂ ಎಲ್ಲರೂ ಚಿಂತನೆ ಮಾಡಬೇಕಾದ ವಿಷಯವಾಗಿದೆ. ಒತ್ತಡ ಸೇರಿದಂತೆ ಬೇರೆ ಬೇರೆ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗುತ್ತಿರುವುದನ್ನು ತಪ್ಪಿಸಬೇಕು. ಸರ್ಕಾರ, ಸಮಾಜ ಎಲ್ಲರೂ ಕೂಡ ಕೆಲಸ ಮಾಡಬೇಕು. ಕುಟುಂಬದ ಸದಸ್ಯರು ಅನ್ಯೋನ್ಯವಾಗಿ ಇರಬೇಕಾಗುತ್ತದೆ. ಆತ್ಯಹತ್ಯೆ ಯಾವುದಕ್ಕೂ ಪರಿಹಾರವಲ್ಲ. ಸಮಸ್ಯೆ ತಾತ್ಕಾಲಿಕ, ಅದಕ್ಕೆ ಆತ್ಮಹತ್ಯೆ ಪರಿಹಾರವಲ್ಲ. ಸುಖ, ದುಃಖ ಬದುಕಿನ ಅವಿಭಾಗ್ಯ ಅಂಗ, ಎಲ್ಲವನ್ನು ತಾತ್ವಿಕವಾಗಿ ತೆಗೆದುಕೊಳ್ಳಬೇಕು. ಆರ್ಥಿಕ, ಸಾಮಾಜಿಕ, ವೈಯಕ್ತಿ, ಮಾಸಿಕ ಕಾರಣಗಳಿಂದ ಉಂಟಾಗುವ ತಾತ್ಕಾಲಿಕ ನೋವಿಗೆ ಆತ್ಮಹತ್ಯೆ ಪರಿಹಾರವಲ್ಲ. ಶಾಲಾ ಕಾಲೇಜುಗಳಿಂದಲೇ ಸಾಮಾಜಿಕ ವ್ಯವಸ್ಥೆ ಈ ನಿಟ್ಟಿನಲ್ಲಿ ಸರಿದೂಗಿಸುವ ಕಾರ್ಯ ಆಗಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ: ವಿಜಯೇಂದ್ರ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಹೋಲಿ ದಹನವಲ್ಲ, ಈತನದ್ದೇ ದಹನವಾಗುತ್ತಿತ್ತು, ಜಸ್ಟ್ ಮಿಸ್: Viral video

ಲಿಫ್ಟ್ ನಲ್ಲಿದ್ದ ವ್ಯಕ್ತಿಗೆ ಹೊರಹೋಗುವಾಗ ಆಗಿದ್ದೇನು: ಎದೆ ನಡುಗಿಸುವಂತಹಾ ದೃಶ್ಯ Video

ಖಮೇನಿ ಹತ್ಯೆ ಬಗ್ಗೆ ಪೋಸ್ಟ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಮುಂದಿನ ಸುದ್ದಿ
Show comments