Publish Date: Mon, 18 Dec 2017 (08:55 IST)
Updated Date: Mon, 18 Dec 2017 (08:57 IST)
ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವ ಬೆನ್ನಲ್ಲೇ ಕಾರ್ಯಕರ್ತರು ಸಂಭ್ರಮಾಚರಣೆ ಶುರು ಮಾಡಿದ್ದಾರೆ.
ಗುಜರಾತ್ ನಲ್ಲಿ ನೃತ್ಯ ಮಾಡಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಾಚರಣೆ ಶುರು ಮಾಡಿದ್ದಾರೆ. ಈಗಾಗಲೇ ಗುಜರಾತ್ ನಲ್ಲಿ 100 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಇನ್ನು ಕೆಲವೆಡೆ ಬಿಜೆಪಿ ಕಾರ್ಯಕರ್ತರು ಹೋಮ, ಹವನ ಮಾಡಿ ಗೆಲುವಿಗಾಗಿ ಪ್ರಾರ್ಥನೆ ನಡೆಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಈ ಮುನ್ನಡೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಹುಶಃ ಬಿಜೆಪಿ ಬಲವಿರುವ ಪ್ರದೇಶಗಳಲ್ಲಿ ಮಾತ್ರ ಈ ಮುನ್ನಡೆ ತೋರಿಸುತ್ತಿರಬಹುದು ಎಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ