ದೆಹಲಿಯಲ್ಲಿ ಅಮಿತ್ ಶಾ ಭೇಟಿ ಮಾಡಲಿದೆ ಬಿಜೆಪಿ ನಿಯೋಗ: ವಿಜಯೇಂದ್ರ

Sampriya
ಸೋಮವಾರ, 8 ಸೆಪ್ಟಂಬರ್ 2025 (19:03 IST)
ನವದೆಹಲಿ: ರಾಜ್ಯದ ಬಿಜೆಪಿ ನಿಯೋಗವು ಇಂದು ರಾತ್ರಿ 9 ಗಂಟೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೀ ಅವರನ್ನು ಭೇಟಿ ಮಾಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಜ್ಯಾಧ್ಯಕ್ಷರಾದ ತಮ್ಮ (ಬಿ.ವೈ.ವಿಜಯೇಂದ್ರ) ನೇತೃತ್ವದಲ್ಲಿ ಭೇಟಿ ನಡೆಯಲಿದೆ. ಶ್ರೀ ಕ್ಷೇತ್ರ ಧರ್ಮಸ್ಥಳ ವಿಚಾರ ಕುರಿತು ಬಿಜೆಪಿ ನಿಯೋಗವು ವರದಿ ನೀಡಲಿದೆ ಎಂದು ವಿವರಿಸಿದರು.

ಧರ್ಮಸ್ಥಳ ಶ್ರೀ ಕ್ಷೇತ್ರದ ವಿಚಾರ ಮಾತ್ರವಲ್ಲದೇ, ಕೊಪ್ಪಳ ಘಟನೆ ಹಾಗೂ ಹಿಂದೂಗಳ ಮೇಲೆ ನಡೆದ ಘಟನೆಗಳ ಕುರಿತು ಮಾತುಕತೆ ನಡೆಸಲಾಗುವುದು. ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆಗಳ ಬಗ್ಗೆ ಬಿಜೆಪಿಯಿಂದ ವರದಿ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಹರೀಶ್ ಪೂಂಜ ಸೇರಿದಂತೆ ಮಂಗಳೂರು ಭಾಗದ ಬಿಜೆಪಿ ಶಾಸಕರು ಇರುತ್ತಾರೆ ಎಂದು ಅವರು ಹೇಳಿದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments