Select Your Language

Notifications

webdunia
webdunia
webdunia
webdunia

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ- ರಾಹುಲ್ ಗಾಂಧಿ

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ- ರಾಹುಲ್ ಗಾಂಧಿ
ನವದೆಹಲಿ , ಬುಧವಾರ, 12 ಡಿಸೆಂಬರ್ 2018 (10:10 IST)
ನವದೆಹಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ, ‘ಅಧಿಕಾರಕ್ಕೆ ಬರುವಾಗ ಕೊಟ್ಟ ಭರವಸೆಗಳನ್ನು ಮೋದಿ ಈಡೇರಿಸಿಲ್ಲ. ದೇಶದ ಯುವಜನತೆಗೆ ಉದ್ಯೋಗ ಸೃಷ್ಟಿ ಭರವಸೆ ಹುಸಿ ಮಾಡಿದ್ದಾರೆ. ದೇಶದ ರೈತರಿಗೂ ನೀಡಿದ್ದ ಭರವಸೆಯನ್ನು ಈಡೇರಿಸಲು ಮೋದಿ ಫೇಲ್ ಆಗಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ಮೋದಿ ಮುಂದಾಗಲೇ ಇಲ್ಲ.


ಯಾವುದೇ ಕಾರ್ಯಗಳನ್ನು ಮಾಡಲು ಮೋದಿ ಸಫಲ ಆಗಿಲ್ಲ. ನರೇಂದ್ರ ಮೋದಿ ವಿರುದ್ಧ ದೇಶದ ಜನತೆ ಕೋಪಗೊಂಡಿದ್ದಾರೆ. ಜನರ ಭಾವನೆಯನ್ನು ಅರಿಯಲು ಮೋದಿ ಎಡವಿದ್ದಾರೆ ಎಂದು
ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

2019ರಲ್ಲಿ ಮೋದಿ ನೇತೃತ್ವದ ಬಿಜೆಪಿ ಸೋಲಿಸುವುದೇ ನಮ್ಮ ಗುರಿ. ಇದು ಮೋದಿ ವಿರುದ್ಧದ ಜನತೆ ತೀರ್ಪು. ದೇಶದ ಅಭಿವೃದ್ಧಿಯನ್ನು ಕಡೆಗಣಿಸಿದ ಮೋದಿಗೆ ಜನತೆ ತಕ್ಕ ಪಾಠಕಲಿಸಿದೆ, ನೋಟು ಅಮಾನ್ಯೀಕರಣ, ಜಿಎಸ್ ಟಿ ವಿರುದ್ಧ ಜನತೆ ತೀರ್ಪು ನೀಡಿದೆ. ಕಾಂಗ್ರೆಸ್ ಪರ ಜನತೆ ತೀರ್ಪು ನೀಡಿದ್ದಕ್ಕೆ ನನಗೆ ತುಂಬಾ ಸಂತೋಷ ಎಂದು ರಾಹುಲ್ ಗಾಂಧಿ ಹೇಳಿದ್ದು, ಜನರು ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಎಸ್ ಮೂರ್ತಿ