Select Your Language

Notifications

webdunia
webdunia
webdunia
webdunia

ದೆಹಲಿಯಲ್ಲಿ ಅರಳಿದ ಬಿಜೆಪಿ: ರಾಜ್ಯ ಬಿಜೆಪಿ ಕಚೇರಿ ಮುಂದೆ ಸಂಭ್ರಮಾಚರಣೆ

Delhi Election Results 2025, AAP Aravind Kejriwal, Karnataka BJP Party

Sampriya

ಬೆಂಗಳೂರು , ಶನಿವಾರ, 8 ಫೆಬ್ರವರಿ 2025 (16:53 IST)
Photo Courtesy X
ಬೆಂಗಳೂರು: ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಬಿಜೆಪಿ ಬಹುಮತ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದ ಮುಂಭಾಗದಲ್ಲಿ ಇಂದು ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸಂಭ್ರಮಾಚರಣೆ ನಡೆಯಿತು. ವಿಪಕ್ಷ ನಾಯಕ ಆರ್.ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವರು ಹಾಗೂ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರು, ಬೆಂಗಳೂರು ನಗರ ಜಿಲ್ಲಾಧ್ಯಕ್ಷರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅತ್ಯಂತ ಸಂತಸದಿಂದ ಪಾಲ್ಗೊಂಡಿದ್ದರು.

ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ನಲಿದಾಡಿ ವಿಜಯೋತ್ಸವವನ್ನು ಆಚರಿಸಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಎಎಪಿ ಪಕ್ಷವನ್ನು ಗೆಲ್ಲಿಸುವುದು ನಮ್ಮ ಕೆಲಸವಲ್ಲ: ಆಪ್‌ ಸೋಲಿನ ಟೀಕೆಗೆ ಕಾಂಗ್ರೆಸ್‌ ತೀಷ್ಣ ಪ್ರತಿಕ್ರಿಯೆ