ಗುಜರಾತ್ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ನ್ಯೂಸ್ ಚುನಾವಣೆ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.
	ಮುಂಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 144 ರಿಂದ 152 ಸ್ಥಾನ ಗಳಿಸಲಿದೆ. ಕಾಂಗ್ರೆಸ್ ಕೇವಲ 26 ರಿಂದ 32 ಸ್ಥಾನಗಳಿಸಲಿದ್ದು, ಪಕ್ಷೇತರರು 3 ರಿಂದ 7 ಸ್ಥಾನಗಳಿಸಲಿದ್ದಾರೆ ಎಂದು ಸಮೀಕ್ಷಾ ವರದಿಯಲ್ಲಿ ಬಹಿರಂಗಪಡಿಸಿದೆ.
 
 			
 
 			
					
			        							
								
																	
	 
	ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೋಡಿ ಮುಂದುವರಿಯಲಿದೆ. ಮತ್ತೆ ರಾಜ್ಯದಲ್ಲಿ ಬಿಜೆಪಿ ಸರಕಾರವೇ ಅಸ್ತಿತ್ವಕ್ಕೆ ಬರಲಿದೆ ಎಂದು ಸಮೀಕ್ಷೆಯಲ್ಲಿ ತಿಳಿಸಲಾಗಿದೆ.
	 
	ಇದೊಂದು ಬಿಜೆಪಿಯ ಪೊಳ್ಳು ಸಮೀಕ್ಷೆ. ಇಂತಹ ಸಮೀಕ್ಷೆಗಳು ಮುಂಬರುವ ಚುನಾವಣೆಯಲ್ಲಿ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ. 
	
	ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ 
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.