Select Your Language

Notifications

webdunia
webdunia
webdunia
webdunia

ಗುಜರಾತ್ನಲ್ಲಿ ಬಿಜೆಪಿಗೆ ಭರ್ಜರಿ ಬಹುಮತ

ಗುಜರಾತ್ನಲ್ಲಿ ಬಿಜೆಪಿಗೆ ಭರ್ಜರಿ ಬಹುಮತ
ನವದೆಹಲಿ , ಮಂಗಳವಾರ, 6 ಡಿಸೆಂಬರ್ 2022 (07:35 IST)
ನವದೆಹಲಿ : ಎರಡು ಲೋಕಸಭಾ ಚುನಾವಣೆಯಲ್ಲಿ ನಿಖರ ಫಲಿತಾಂಶ ನೀಡಿ ಸುದ್ದಿಯಾಗಿದ್ದ ಟುಡೇಸ್ ಚಾಣಕ್ಯ ಈ ಬಾರಿ ಗುಜರಾತ್ನಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆಯಲಿದೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ, ಕಾಂಗ್ರೆಸ್ ಮಧ್ಯೆ ನೆಕ್ ಟು ನೆಕ್ ಸ್ಪರ್ಧೆಯಿದೆ ಎಂದು ಭವಿಷ್ಯ ನುಡಿದಿದೆ. ಗುಜರಾತ್ನಲ್ಲಿ ಬಿಜೆಪಿ 150 ± 11, ಕಾಂಗ್ರೆಸ್ 19 ± 9, ಆಪ್ 11 ± 7, ಇತರರು 2 ± 2 ಗೆಲ್ಲಬಹುದು ಎಂದು ಹೇಳಿದೆ.

ಸತತ 22 ವರ್ಷಗಳ ಕಾಲ ಬಿಜೆಪಿ ಗುಜರಾತ್ನಲ್ಲಿ ಅಧಿಕಾರದಲ್ಲಿದೆ. 1995 ರಿಂದ ನಡೆದ 6 ಚುನಾವಣೆಗಳಲ್ಲಿ ಕಮಲ ಅರಳುತ್ತಲೇ ಇದೆ.

ಮೋದಿ ಪ್ರಧಾನಿಯಾದ ಬಳಿಕ ನಾಯಕತ್ವದ ಕೊರತೆ ಅನುಭವಿಸಿದರೂ ಮುಖ್ಯಮಂತ್ರಿಗಳನ್ನು ಬದಲಾಯಿಸುವ ಮೂಲಕ ಆಡಳಿತ ವಿರೋಧಿ ಅಲೆಯನ್ನು ಕಡಿಮೆ ಮಾಡಿದ್ದು ಬಿಜೆಪಿಗೆ ನೆರವಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪರೋಕ್ಷವಾಗಿ ಜಾರಕಿಹೊಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ