Select Your Language

Notifications

webdunia
webdunia
webdunia
webdunia

ಚುನಾವಣೆ ತಯಾರಿ ಆರಂಭಿಸಿದ ಬಿಜೆಪಿ

ಚುನಾವಣೆ ತಯಾರಿ ಆರಂಭಿಸಿದ ಬಿಜೆಪಿ
ನವದೆಹಲಿ , ಬುಧವಾರ, 7 ಡಿಸೆಂಬರ್ 2022 (10:10 IST)
ನವದೆಹಲಿ : ಗುಜರಾತ್ ವಿಧಾನಸಭೆ ಚುನಾವಣೆ ಬೆನ್ನಲ್ಲೇ ಕರ್ನಾಟಕದ ಮೇಲೆ ಗಮನ ಹರಿಸಿರುವ ಬಿಜೆಪಿ ಹೈಕಮಾಂಡ್ ರಾಜ್ಯದಲ್ಲಿ ನಿರಂತರ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ಸೂಚಿಸಿದೆ.

ಇದಲ್ಲದೇ ಪ್ರಧಾನಿ ನರೇಂದ್ರ ಮೋದಿ ತಿಂಗಳಿಗೆ ಒಮ್ಮೆ ಕರ್ನಾಟಕ ಭೇಟಿಗೆ ನಿರ್ಧರಿಸಿದ್ದು, ಕೇಂದ್ರ ಸಚಿವರು ನಿರಂತರ ಭೇಟಿಗೆ ತಿರ್ಮಾನಿಸಿದ್ದಾರೆ.

ಸೋಮವಾರ ದೆಹಲಿಯ ಕೇಂದ್ರ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕರ್ನಾಟಕ ನಮ್ಮ ಮುಂದಿನ ಗುರಿ ಎಂದು ತಿಳಿಸಿದ್ದಾರೆ. ಸಭೆಯಲ್ಲಿ ನರೇಂದ್ರ ಮೋದಿ ಸೇರಿ ಹಲವು ನಾಯಕರು ಭಾಗಿಯಾಗಿದ್ದರು. 

ಸಭೆಯಲ್ಲಿ 2023ರಲ್ಲಿ ಬರುವ ಕರ್ನಾಟಕ, ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ, ತ್ರಿಪುರ ಸೇರಿ ಹಲವು ರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು 2024ರ ಲೋಕಸಭೆ ಚುನಾವಣೆ ತಯಾರಿ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ವಿಶೇಷವಾಗಿ ಕರ್ನಾಟಕ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಲಾಯಿತು.

Share this Story:

Follow Webdunia kannada

ಮುಂದಿನ ಸುದ್ದಿ

ಟ್ವಿಟ್ಟರ್ ಉದ್ಯೋಗಿಗಳಿಗೆ ಮಲಗಲು ಬೆಡ್ರೂಂಗಳನ್ನೂ ಸಿದ್ಧಪಡಿಸಿದ ಮಸ್ಕ್