ಪಶ್ಚಿಮ ಬಂಗಾಳದ ಬಿಜೆಪಿ ನಾಯಕಿ ರೂಪಾ ಗಂಗೂಲಿ ಮೇಲೆ ನಡೆದ ದಾಳಿಯನ್ನು ಖಂಡಿಸಿ ಬಿಜೆಪಿ ಬೆಂಬಲಿಗರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ.
ನಿನ್ನೆ ರವಿವಾರದಂದು 24 ಪರಗಣ ಜಿಲ್ಲೆಯ ಡೈಮಂಡ್ ಹಾರ್ಬರ್ ಬಳಿ ರೂಪಾ ಗಂಗೂಲಿ ತೆರಳುತ್ತಿರುವ ಸಂದರ್ಭದಲ್ಲಿ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಸೌಥ್ 24 ಪರಗಣ ಜಿಲ್ಲೆಯ ಕಾಕ್‌ದ್ವಿಪ್ ಬಳಿಸಿರುವ ಈಶ್ವರಿಪುರ ಗ್ರಾಮದಲ್ಲಿ ಪಕ್ಷದ ಕಾರ್ಯಕರ್ತನೊಬ್ಬನನ್ನು ಭೇಟಿ ಮಾಡಿ ಕೋಲ್ಕತಾಗೆ ಮರಳುತ್ತಿರುವ ಸಂದರ್ಭದಲ್ಲಿ ಟಿಎಂಸಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಗಂಗೂಲಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಡೈಮಾಂಡ್ ಹಾರ್ಬರ್ ಬಳಿ ಕಾರು ನಿಲ್ಲಿಸುವುದು ಬೇಡ ಎಂದು ಬಿಜೆಪಿ ಮುಖಂಡರು ರೂಪಾ ಗಂಗೂಲಿಯವರಿಗೆ ಮನವಿ ಮಾಡಿದರೂ ಕೇಳದೆ, ಕಾರು ನಿಲ್ಲಿಸಿ ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ. ಈ ಸಂದರ್ಭದಲ್ಲಿ ಕೆಲ ಯುವಕರು ಗಂಗೂಲಿಯವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದರೆ, ಗ್ರಾಮದ ಕೆಲ ಮಹಿಳೆಯರು ಆಕೆಯ ಕೂದಲು ಹಿಡಿದು ಎಳೆದಾಡಿದ್ದಾರೆ. ಮತ್ತು ಅವರ ಜೊತೆಯಿದ್ದ ಮಹಿಳೆಗೆ ಕಪಾಳಮೋಕ್ಷ ಮಾಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.