Select Your Language

Notifications

webdunia
webdunia
webdunia
webdunia

ಬಿಜೆಪಿ ಸಂವಿಧಾನವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ: ರಾಹುಲ್ ಗಾಂಧಿ ಆರೋಪ

Rahul Gandhi

Sampriya

ಬೋಲಂಗೀರ್ , ಬುಧವಾರ, 15 ಮೇ 2024 (16:43 IST)
ಬೋಲಂಗೀರ್: ಈ ಬಾರಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬಂದರೆ ಆದಿವಾಸಿಗಳು, ದಲಿತರು, ಹಿಂದುಳಿದ ವರ್ಗಗಳಿಗೆ ಒದಗಿಸಲಾದ ಮೀಸಲಾತಿಯನ್ನು ರದ್ದುಗೊಳಿಸಿ, ಸಂವಿಧಾನವನ್ನು ನಾಶಮಾಡಲು ಬಯಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.

ಒಡಿಶಾದ ಬೋಲಂಗೀರ್‌ನಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, 'ಬಿಜೆಪಿ ಈ ಬಾರಿಯ ಚುನಾವಣೆ ಗೆದ್ದರೆ ದೇಶವನ್ನು 22 ಬಿಲಿಯನೇರ್‌ಗಳು ನಡೆಸಲಿದ್ದು, ಸಾರ್ವಜನಿಕ ವಲಯವನ್ನು ಖಾಸಗೀಕರಣಗೊಳಿಸುತ್ತದೆ ಎಂದರು.

ಭಾಷಣದ ವೇಳೆ ಸಂವಿಧಾನದ ಪುಸಕ್ತದ ಪ್ರತಿಯನ್ನು ಕೈಯಲ್ಲಿ ಹಿಡಿದು ಮಾತನಾಡಿದ ಅವರು, 'ಬಿಜೆಪಿ ಈ ಪುಸ್ತಕವನ್ನು ಹರಿದು ಬಿಸಾಡಲು ಯತ್ನಿಸುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಆ ರೀತಿ ಆಗದಿರಲು ಕಾಂಗ್ರೆಸ್ ಹಾಗೂ ಈ ದೇಶದ ಜನತೆ ಬಿಡುವುದಿಲ್ಲ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ಪಂಜಾಬ್‌ನಲ್ಲಿ ಅರವಿಂದ್ ಕೇಜ್ರಿವಾಲ್ ಬೃಹತ್ ರೋಡ್ ಶೋ