Webdunia - Bharat's app for daily news and videos

Install App

ವೇಶ್ಯಾವಾಟಿಕೆ ಆರೋಪದಲ್ಲಿ ಬಿಜೆಪಿ ನಾಯಕ ಬಂಧನ!

Webdunia
ಬುಧವಾರ, 27 ಜುಲೈ 2022 (08:55 IST)
ಲಕ್ನೋ : ಫಾರ್ಮ್ಹೌಸ್ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಮೇಘಾಲಯದ ಉಪಾಧ್ಯಕ್ಷ ಬೆರ್ನಾಡ್ ಎನ್ ಮರಕ್ ಅವರನ್ನು ಉತ್ತರಪ್ರದೇಶದಲ್ಲಿ ಬಂಧಿಸಲಾಗಿದೆ.

ಶನಿವಾರ ಪೊಲೀಸರು ನಡೆಸಿದ ದಾಳಿಯಲ್ಲಿ ಮರಕ್ ಅವರ ಫಾರ್ಮ್ಹೌಸ್ನಿಂದ 6 ಅಪ್ರಾಪ್ತರನ್ನು ರಕ್ಷಿಸಿ, 73 ಜನರನ್ನು ಬಂಧಿಸಲಾಗಿತ್ತು. ಘಟನೆಯ ಬೆನ್ನಲ್ಲೇ ಮರಕ್ ಪರಾರಿಯಾಗಿದ್ದರು. ಅವರನ್ನು ತನಿಖೆಗೆ ಸಹಕರಿಸುವಂತೆ ಕೇಳಿಕೊಳ್ಳಲಾಯಿತಾದರೂ ತನಿಖಾಧಿಕಾರಿಗಳಿಂದ ಅವರು ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

ಸೋಮವಾರ ತುರಾ ನ್ಯಾಯಾಲಯ ಮರಕ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಇಂದು ಮೇಘಾಲಯ ಪೊಲೀಸರು ಅವರಿಗೆ ಲುಕ್ಔಟ್ ನೋಟಿಸ್ ನೀಡಿದ್ದು, ಇದಾದ ಕೆಲವೇ ಗಂಟೆಗಳಲ್ಲಿ ಅವರನ್ನು ಉತ್ತರಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. 

ಪೊಲೀಸರು ಫಾರ್ಮ್ಹೌಸ್ನಿಂದ 47 ಯುವಕರು ಹಾಗೂ 26 ಮಹಿಳೆಯರನ್ನು ಬಂಧಿಸಿದ್ದರು. 6 ಅಪ್ರಾಪ್ತರನ್ನು ಕೊಳಕಾದ ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು. 30 ಸಣ್ಣ ಕೊಠಡಿಗಳಿದ್ದ ಫಾರ್ಮ್ಹೌಸ್ ಅನ್ನು ಅಕ್ರಮವಾಗಿ ವೇಶ್ಯಾವಾಟಿಕೆಗೆ ಬಳಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments