Webdunia - Bharat's app for daily news and videos

Install App

ಬಿಜೆಪಿ ನಾಯಕಿ, ಮಾಜಿ ಕೇಂದ್ರ ಸಚಿವೆ ನಿಧನ

Webdunia
ಸೋಮವಾರ, 7 ನವೆಂಬರ್ 2016 (11:35 IST)
ಮಾಜಿ ಕೇಂದ್ರ ಸಚಿವ, ಬಿಜೆಪಿ ಹಿರಿಯ ನಾಯಕಿ ಜೈವಂತಿ ಬೆನ್ ಮೆಹ್ತಾ ಭಾನುವಾರ-ರವಿವಾರ ನಡುವಿನ ರಾತ್ರಿ 1.30ಕ್ಕೆ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 78 ವರ್ಷ ವಯಸ್ಸಾಗಿತ್ತು.

ಅಟಲ್ ಬಿಹಾರಿ ಸಚಿವ ಸಂಪುಟದಲ್ಲಿ 1996ರಿಂದ 1999ರವರೆಗೆ ಅವರು ಸಚಿವೆಯಾಗಿ ಕಾರ್ಯ ನಿರ್ವಹಿಸಿದ್ದರು. ಅತ್ಯಂತ ಕೆಳಹಂತದಿಂದ ಹಂತಹಂತವಾಗಿ ರಾಜಕೀಯದ ಮೆಟ್ಟಿಲುಗಳನ್ನು ಏರಿದ ಅವರು ಸಮರ್ಥ ಜನಪ್ರತಿನಿಧಿ ಎನ್ನಿಸಿಕೊಂಡಿದ್ದರು. 
 
ಕಳೆದ 6 ವರ್ಷಗಳ ಹಿಂದೆ ಅವರು ತಮ್ಮ ಬಹುಭಾಷಿ ಆತ್ಮಕಥೆ 'ಮಾರ್ಚಿಂಗ್ ವಿದ್ ಟೈಮ್‌'ನ್ನು ಬರೆದಿದ್ದರು. ಅದರಲ್ಲಿ ಅವರು ಒಂದು ಮಧ್ಯಮವರ್ಗದ ಗೃಹಿಣಿಯಾಗಿದ್ದ ತಾವು ಪಾಲಿಕೆ ಸದಸ್ಯೆ, ಸಂಸದೆ ಬಳಿಕ ಕೇಂದ್ರ ಸಚಿವೆಯಾದ ಯಾತ್ರೆಯನ್ನು ವಿವರಿಸಿದ್ದಾರೆ. 
 
ಹಿರಿಯ ನಾಯಕಿ ನಿಧನಕ್ಕೆ ಪ್ರಧಾನಿ ಮೋದಿ, ಕೇಂದ್ರ ಸಚಿವರು, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸೇರಿದಂತೆ ವಿವಿಧ ಪಕ್ಷಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ. 
 
ಅವರ ಅಂತಿಮ ಸಂಸ್ಕಾರವನ್ನು ಇಂದು ಸಂಜೆ ಶಿವಾಜಿ ಪಾರ್ಕ್‌ನಲ್ಲಿರುವ ಸ್ಮಶಾನದಲ್ಲಿ ನೆರವೇರಿಸಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ಮುಂದಿನ ಸುದ್ದಿ
Show comments