ನವದೆಹಲಿ: ಬಿಜೆಪಿಯ ಹಿರಿಯ ನಾಯಕ, ಭೀಷ್ಮ ಎಂದೇ ಕರೆಯಲ್ಪಡುವ ಎಲ್ ಕೆ ಅಡ್ವಾ ಣಿ ಅನಾರೋಗ್ಯದ ಕಾರಣದಿಂದ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇತ್ತೀಚೆಗಷ್ಟೇ ಅಡ್ವಾಣಿ 97 ನೇ ಜನ್ಮದಿನವನ್ನು ಆಚರಿಸಿಕೊಂಡಿದ್ದರು. ಇತ್ತೀಚೆಗಿನ ದಿನಗಳಲ್ಲಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಅವರು ಪದೇ ಪದೇ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಉಸಿರಾಟದ ಸಮಸ್ಯೆಯಿರುವ ಅಡ್ವಾಣಿಗೆ ಈಗ ಮತ್ತೆ ಆರೋಗ್ಯ ಸಮಸ್ಯೆ ಉಲ್ಬಣಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಳೆದ ನಾಲ್ಕೈದು ತಿಂಗಳ ಅವಧಿಯಲ್ಲಿ ಇದು ನಾಲ್ಕನೇ ಬಾರಿಗೆ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಈಗಾಗಲೇ ಅವರು ಅಪೋಲೋ ಮತ್ತು ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಹಿರಿಯ ನಾಯಕ ಅಡ್ವಾಣಿ ಬೇಗನೇ ಚೇತರಿಸಿಕೊಳ್ಳಲಿ ಎಂದು ಬಿಜೆಪಿ ಹಾರೈಸಿದೆ.
ಇತ್ತೀಚೆಗಷ್ಟೇ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತ ರತ್ನ ನೀಡಿ ಗೌರವಿಸಿದ್ದರು. ಇತ್ತೀಚೆಗಿನ ದಿನಗಳಲ್ಲಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅಪರೂಪ. ಆದರೆ ಅವರ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಸೇರಿದಂತೆ ಬಿಜೆಪಿ ನಾಯಕರು ಅವರ ನಿವಾಸಕ್ಕೆ ತೆರಳಿ ಶುಭ ಹಾರೈಸಿದ್ದರು.