Webdunia - Bharat's app for daily news and videos

Install App

ಕನ್ಹಯ್ಯಾ ನಾಲಿಗೆ ಕತ್ತರಿಸಿದವರಿಗೆ 5 ಲಕ್ಷ ಆಫರ್ ನೀಡಿದ ಬಿಜೆಪಿ ನಾಯಕ

Webdunia
ಶನಿವಾರ, 5 ಮಾರ್ಚ್ 2016 (15:31 IST)
ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕನ್ಹಯ್ಯಾ ಅವರ ನಾಲಿಗೆ ಕತ್ತರಿಸಿದವರಿಗೆ 5 ಲಕ್ಷ ರೂಪಾಯಿ ಬಹುಮಾನ ಭಾರತೀಯ ಜನತಾ ಯುವ ಮೋರ್ಚಾ ನಾಯಕನನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. 
 
ಉತ್ತರ ಪ್ರದೇಶ್ ಬದೌನ್ ಜಿಲ್ಲೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಲ್ದೀಪ್ ವರ್ಶೆನೆಯ್ ಈ ಹೇಳಿಕೆಯನ್ನು ನೀಡಿದ್ದರು. ದೇಶದ್ರೋಹಿ ಘೋಷಣೆಗಳನ್ನು ಕೂಗಿದ ಬಳಿಕ ಕನ್ಹಯ್ಯಾ ಎಲ್ಲರನ್ನು ಗುರಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದ ಅವರು ಆತನ ನಾಲಿಗೆ ಕತ್ತರಿಸಿ ತಂದರೆ ಅವರಿಗೆ 5 ಲಕ್ಷ ರೂಪಾಯಿ ಬಹುಮಾನವನ್ನು ನೀಡುತ್ತೇನೆ ಎಂದು ಘೋಷಿಸಿದ್ದರು. 
 
ವರ್ಶೆನೆಯ್ ಅವರನ್ನು 6 ವರ್ಷದ ಮಟ್ಟಿಗೆ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
 
ದೇಶದ್ರೋಹ ಆರೋಪದ ಮೇಲೆ ಫೆಬ್ರವರಿ 12 ರಂದು ಬಂಧಿಸಲ್ಪಟ್ಟಿದ್ದ ಕನ್ಹಯ್ಯಾ ಷರತ್ತುಬದ್ದ ಜಾಮೀನಿನ ಮೇರೆಗೆ ಮಾರ್ಚ್ 3 ರಂದು ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. 
 
ಜೈಲಿನಿಂದ ಬಿಡುಗಡೆಯಾದ ಬಳಿಕ ಜೆಎನ್‌ಯು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ್ದ ಕನ್ಹಯ್ಯಾ ನನ್ನ ಐಕಾನ್ ಅಫ್ಜಲ್ ಗುರು ಅಲ್ಲ ರೋಹಿತ್ ವೇಮುಲ ಎಂದು ಹೇಳಿದ್ದಾನೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments