Publish Date: Mon, 31 Jul 2017 (12:50 IST)
Updated Date: Mon, 31 Jul 2017 (12:51 IST)
ಗೋವು ರಕ್ಷಣೆಯ ನೆಪದಲ್ಲಿ ಬಿಜೆಪಿ ನಾಯಕರು ಕೊಲೆಗಡುಕರನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಲೋಕಸಭೆಯ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ಗೋವು ರಕ್ಷಣೆಯ ನೆಪದಲ್ಲಿ ಹತ್ಯೆಗಳನ್ನು ಎಸಗುತ್ತಿದ್ದಾರೆ. ಇದರಲ್ಲಿ ಬಿಜೆಪಿ ಸಂಪರ್ಕದಲ್ಲಿರುವ ಭಜರಂಗದಳ ಸೇರಿದಂತೆ ಸಂಘಟನೆಗಳು ಭಾಗಿಯಾಗಿವೆ ಎಂದು ಆರೋಪಿಸಿದರು.
70 ವರ್ಷಗಳ ಇತಿಹಾಸದಲ್ಲಿ ಇಂತಹ ಘಟನೆಗಳು ನಡೆದಿರಲಿಲ್ಲ.ಆದರೆ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ನೇತೃತ್ವದ ಬಿಜೆಪಿ ಪಕ್ಷ ಬಹಿರಂಗವಾಗಿ ಕೊಲೆಗಡುಕರನ್ನು ಸಮರ್ಥಿಸಿಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭೆಯ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳು ಪ್ರಧಾನಿ ಮೋದಿ ನೇತೃತ್ವದ ಸರಕಾರವನ್ನು ತರಾಟೆಗೆ ತೆಗೆದುಕೊಂಡು ಸದನದಲ್ಲಿ ಕೋಲಾಹಲವೆಬ್ಬಿಸಿದವು
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.