Webdunia - Bharat's app for daily news and videos

Install App

ಬಿಜೆಪಿ ನಾಯಕರ ಮಾತಿನಲ್ಲಿ ಅವರ ಸಂಸ್ಕ್ರತಿ ತಿಳಿಯುತ್ತದೆ: ಸಿದ್ದರಾಮಯ್ಯ

Webdunia
ಭಾನುವಾರ, 24 ಜನವರಿ 2016 (12:00 IST)
ಸೋನಿಯಾ ಗಾಂಧಿ ಒಬ್ಬ ರಾಷ್ಟ್ರೀಯ ಪಕ್ಷದ ಅಧ್ಯಕ್ಷಕರು ಅವರ ಬಗ್ಗೆ ಏಕವಚನ ಪ್ರಯೋಗಿಸುವುದು ಸರಿಯಲ್ಲ. ಇದರಿಂದ ಬಿಜೆಪಿ ನಾಯಕರ ಮಾತಿನಲ್ಲಿ ಅವರ ಸಂಸ್ಕ್ರತಿ ತಿಳಿಯುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
 
ಬಿಜೆಪಿ ನಾಯಕರು ಏಕವಚನದಲ್ಲಿ ಮಾತನಾಡಿದರೆ ಅವರ ಘನತೆ ಗೌರವಕ್ಕೆ ಕುಂದುಬರುತ್ತದೆ ಎನ್ನುವ ಅರಿವಿರಲಿ. ಯಾರೊಬ್ಬರ ಬಗ್ಗೆ ಆರೋಪ ಮಾಡುವಾಗ ಅವರ ವಿರುದ್ಧ ಏಕವಚನದಲ್ಲಿ ಟೀಕಿಸುವುದು ಬಿಜೆಪಿ ಪಕ್ಷಕ್ಕೆ ಗೌರವ ತರುವುದಿಲ್ಲ ಎಂದು ಹೇಳಿದರು.
 
ಬಿಜೆಪಿ ನಾಯಕರು ದಾಖಲೆಗಳಿಲ್ಲದೇ ಆರೋಪಗಳನ್ನು ಮಾಡುವುದರಲ್ಲಿ ನಿಸ್ಸಿಮರು. ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರದ ಕೂಪದಲ್ಲಿ ಮುಳುಗೆದ್ದ ಬಿಜೆಪಿ ನಾಯಕರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಯಾವುದೇ ನೈತಿಕ ಹಕ್ಕಿಲ್ಲ ಎಂದು ಗುಡುಗಿದರು.
 
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಭ್ರಷ್ಟಾಚಾರರಹಿತ ಪಾರದರ್ಶಕ ಅಡಳಿತ ನೀಡಿದೆ. ಇದನ್ನು ಸಹಿಸಲಾಗದ ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments