Publish Date: Thu, 19 Dec 2019 (12:04 IST)
Updated Date: Thu, 19 Dec 2019 (12:34 IST)
ನವದೆಹಲಿ : ಸಿಎಂ ಯಡಿಯೂರಪ್ಪ ನನಗೆ ಮಂತ್ರಿ ಸ್ಥಾನ ಕೊಟ್ಟೆ ಕೊಡುತ್ತಾರೆ ಎಂದು ಶಾಸಕ ಉಮೇಶ್ ಕತ್ತಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ದೆಹಲಿಯಲ್ಲಿ ಠಿಕಾಣಿ ಹೂಡಿದ್ದ ಉಮೇಶ್ ಕತ್ತಿ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂತ್ರಿಯಾಗಿ ಒಳ್ಳೆಯ ಕೆಲಸ ಮಾಡಿದ್ದೇನೆ. ಹೀಗಾಗಿ ನನಗೆ ಮಂತ್ರಿ ಸ್ಥಾನ ಕೊಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಕರ್ನಾಟಕದಲ್ಲಿ ಬೆಳಗಾವಿ ವಿಶೇಷವಾದ ಜಿಲ್ಲೆ. ಜಿಲ್ಲೆಗೆ ಹೆಚ್ಚು ಸಚಿವ ಸ್ಥಾನ ಕೊಟ್ರೆ ಒಳ್ಳೆಯದು. ಎಲ್ಲದಕ್ಕೂ ಸಿಎಂ ಬಿಎಸ್ ವೈ ನಿರ್ಧರಿಸುತ್ತಾರೆ ಎಂದು ಅವರು ಹೇಳಿದ್ದಾರೆ.