Publish Date: Sun, 27 Aug 2017 (11:22 IST)
Updated Date: Sun, 27 Aug 2017 (11:25 IST)
ಮಹಾಮೈತ್ರಿಕೂಟವನ್ನು ತ್ಯಜಿಸಿ ಬಿಜೆಪಿ ತೆಕ್ಕೆಗೆ ಜಾರಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಬಿಜೆಪಿ ಓಡಿಸಿ ದೇಶ ಉಳಿಸಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಇಂದು ನಗರದಲ್ಲಿ ಆಯೋಜಿಸಲಾದ ಬೃಹತ್ ಸಭೆಯಲ್ಲಿ ವಿಪಕ್ಷಗಳ ನಾಯಕರು ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಿದ್ದು, ನಗರದಾದ್ಯಂತ ಲಾಲು ಪುತ್ರ ತೇಜಸ್ವಿ ಯಾದವ್ ಕಟೌಟ್‌ಗಳು ರಾರಾಜಿಸುತ್ತಿವೆ.
ಸಿಎಂ ನಿತೀಶ್ ಕುಮಾರ್ ಬಿಹಾರ್ ರಾಜ್ಯದ ಜನತೆಗೆ ಮೋಸ ಮಾಡಿದ್ದು, ಅವರಿಗೆ ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಮೋದಿ ಸರಕಾರ ರಾಜ್ಯ ಸರಕಾರಗಳನ್ನು ಅಸ್ಥಿರಗೊಳಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿಯನ್ನು ದೇಶದಿಂದ ಓಡಿಸಬೇಕು ಅಂದಾಗ ಮಾತ್ರ ದೇಶ ಉಳಿಯುತ್ತದೆ. ವಿಪಕ್ಷಗಳು ಒಂದಾಗಿ ಒಗ್ಗಟ್ಟಿನಿಂದ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಿದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.