Webdunia - Bharat's app for daily news and videos

Install App

ರಾಹುಲ್ ಗಾಂಧಿ ಸ್ಲೀಪಿಂಗ್ ಬ್ಯೂಟಿಯಂತೆ: ಬಿಜೆಪಿ ಸಂಸದೆ ಪೂನಮ್

Webdunia
ಶನಿವಾರ, 30 ಜುಲೈ 2016 (14:12 IST)
ಮುಂಗಾರು ಅದಿವೇಶನದಲ್ಲಿ ಅಗತ್ಯ ವಸ್ತುಗಳ ದರ ಏರಿಕೆ ಕುರಿತಂತೆ ಮೋದಿ ಸರಕಾರದ ವಿರುದ್ಧ ರಾಹುಲ್ ಗಾಂಧಿ ನಡೆಸಿರುವ ವಾಗ್ದಾಳಿಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಸಂಸದೆ ಪೂನಮ್ ಮಹಾಜನ್, ಸ್ಲೀಪಿಂಗ್ ಬ್ಯೂಟಿಗೆ ದರ ಏರಿಕೆಯಾಗಿರುವುದು ಗೊತ್ತಾಗಿದೆ ಎಂದು ಲೇವಡಿ ಮಾಡಿದರು. 
 
ಸಂಸತ್ತಿನ ಚರ್ಚಾ ವೇಳೆಯಲ್ಲಿ ಮಾತನಾಡಿದ ಮಹಾಜನ್, ಸದಾ ರಾಜಕೀಯೇತರ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಯುವ ಸಬಲೀಕರಣ ಮತ್ತು ದರ ಏರಿಕೆ ಕುರಿತಂತೆ ಸದನದಲ್ಲಿ ಮಾತನಾಡಿರುವುದು ಉತ್ತಮ ಬೆಳವಣಿಗೆ ಎಂದರು.
 
ಯುಪಿಎ ಸರಕಾರದ 10 ವರ್ಷಗಳ ಅವಧಿಯಲ್ಲಿ ದರ ಏರಿಕೆ ನಿಯಂತ್ರಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲು ಯಾಕೆ ಸಾಧ್ಯವಾಗಲಿಲ್ಲ ಎಂದು ತಿರುಗೇಟು ನೀಡಿದರು. 
 
ಕಳೆದ 60 ವರ್ಷಗಳಿಂದ ನಿದ್ರಾವಸ್ತೆಯಲ್ಲಿರುವ ಕಾಂಗ್ರೆಸ್ ಪಕ್ಷದ ಹೆಚ್ಚಿಗೆ ಹೇಳಲು ಸಾಧ್ಯವಿಲ್ಲ. ಕೆಲವರು ಇವತ್ತಿಗೂ ಸದನದಲ್ಲಿ ಗೊರಕೆ ಹೊಡೆಯುತ್ತಿರುತ್ತಾರೆ ಎಂದು ಪರೋಕ್ಷವಾಗಿ ರಾಹುಲ್ ಗಾಂಧಿಯನ್ನು ಟೀಕಿಸಿದರು.
 
ಕಳೆದ ವಾರ ಸಂಸತ್ತಿನಲ್ಲಿ ರಾಹುಲ್ ಗಾಂಧಿ ನಿದ್ರೆಗೆ ಜಾರಿರುವ ವಿಡಿಯೋ ಬಹಿರಂಗವಾಗಿ ವಿಪಕ್ಷಗಳನ್ನು ಹಣಿಯಲು ಸರಕಾರಕ್ಕೆ ಹೊಸ ಅಸ್ತ್ರ ದೊರೆತಂತಾಗಿತ್ತು.
 
ಪ್ರಧಾನಿ ನರೇಂದ್ರ ಮೋದಿ ಉಕ್ಕಿನ ಮನುಷ್ಯ ಎಂದು ಬಿಜೆಪಿ ಸಂಸದ ಪೂನಮ್ ಮಹಾಜನ್ ಹೊಗಳಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈಗೀನ ಮಕ್ಕಳಿಗೆ ಬುದ್ದಿ ಹೇಳುವುದು ಕಷ್ಟ, ಮೊಬೈಲ್ ಗೀಳು ಬಿಡು ಎಂದಿದ್ದಕ್ಕೆ ಯುವತಿ ಹೀಗೇ ಮಾಡೋದಾ

ಪಾಕ್‌ಗೆ ನುಗ್ಗಿ ಹೊಡೆಯಿರಿ: ಅಮಿತ್ ಶಾ ಬಳಿ ಇದನ್ನೇ ಹೇಳಿದ್ದೇನೆ ಎಂದ ಸಚಿವ ಸಂತೋಷ್‌ ಲಾಡ್‌

ಇಂದಿರಾಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಸಿದ್ದರಾಮಯ್ಯರನ್ನು ಉಚ್ಛಾಟಿಸುವ ಧಮ್‌ ಇದ್ಯಾ: ಡಿಕೆಶಿಗೆ ಅಶೋಕ್‌ ಸವಾಲು

ಗಡಿಯಲ್ಲಿ ಮತ್ತೆ ಪಾಕ್‌ ಕಿರಿಕ್‌: ಅಪ್ರಚೋದಿತ ಗುಂಡಿನ ದಾಳಿಗೆ ತಕ್ಕ ಉತ್ತರ ನೀಡಿದ ಭಾರತೀಯ ಸೇನೆ

ಕೋಲ್ಕತ್ತಾದಲ್ಲಿ ಹೊತ್ತಿ ಉರಿದ ಹೋಟೆಲ್‌ ಕಟ್ಟಡ: 15 ಮಂದಿ ಸಜೀವ ದಹನ, ಹಲವರಿಗೆ ಗಾಯ

ಮುಂದಿನ ಸುದ್ದಿ
Show comments