Publish Date: Thu, 19 May 2022 (07:18 IST)
Updated Date: Thu, 19 May 2022 (01:20 IST)
ನವದೆಹಲಿ : ಮುಂಬರುವ ವಿಧಾನಸಭೆ, ಲೋಕಸಭೆ ಚುನಾವಣೆಗೆ ಚಿಂತನ ಶಿಬಿರದ ಮೂಲಕ ತಯಾರಿ ಆರಂಭಿಸಿದ ಬೆನ್ನಲ್ಲೇ ಬಿಜೆಪಿಯೂ ತಯಾರಿ ಆರಂಭಿಸಿದ್ದು,
ಇಂದಿನಿಂದ ಮೂರು ದಿನಗಳ ಕಾಲ ರಾಜಸ್ಥಾನದ ಜೈಪುರ್ನಲ್ಲಿ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಡೆಸಲಿದೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ನೇತೃತ್ವದಲ್ಲಿ ಹೈ ವೊಲ್ಟೇಜ್ ಮೀಟಿಂಗ್ ನಡೆಯಲಿದ್ದು,
ಸಭೆಯಲ್ಲಿ ರಾಷ್ಟ್ರೀಯ ಪದಾಧಿಕಾರಿಗಳು, ರಾಜ್ಯ ಪ್ರಮುಖರು, ಮುಂಚೂಣಿ ಸಂಘಟನೆಗಳ ಮುಖ್ಯಸ್ಥರು, ಸಂಘಟನಾ ಕಾರ್ಯದರ್ಶಿಗಳು ಸೇರಿದಂತೆ 136 ಪದಾಧಿಕಾರಿಗಳು, ಮಾಜಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ.
ಸಭೆಯಲ್ಲಿ ಕರ್ನಾಟಕ, ಗುಜರಾತ್, ಹಿಮಾಚಲ ಪ್ರದೇಶ ಸೇರಿದಂತೆ ಲೋಕಸಭೆ ಚುನಾವಣೆಗಳ ಬಗ್ಗೆ ಚರ್ಚೆ ನಡೆಯಲಿದ್ದು ತಂತ್ರಗಾರಿಕೆ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು, ಬೆಲೆ ಏರಿಕೆ, ಹಣದುಬ್ಬರದಂತಹ ವಿಷಯಗಳನ್ನು ಸಮರ್ಥಿಸಿಕೊಳ್ಳುವ ಬಗ್ಗೆ ಸಮಾಲೋಚನೆ ನಡೆಯಲಿದೆ.