ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದಿರಲು ಬಿಜೆಪಿ ನಿರ್ಧರಿಸಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.
ರಾಜ್ಯದ ಎಲ್ಲಾ ಪಕ್ಷಗಳು ಬಿಜೆಪಿ ಸಿಎಂ ಅಭ್ಯರ್ಥಿಯನ್ನು ಘೋಷಿಸುವ ಬಗ್ಗೆ ನಿರೀಕ್ಷಿಸುತ್ತಿವೆ. ಯಾವುದೇ ಸಿಎಂ ಅಭ್ಯರ್ಥಿಯನ್ನು ಘೋಷಿಸದೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಷದ ರಣನೀತಿಯಾಗಿದೆ ಎಂದು ತಿಳಿಸಿದ್ದಾರೆ.
ಆಸ್ಸಾಂ, ದೆಹಲಿಯಲ್ಲಿ ನಾವು ಸಿಎಂ ಅಭ್ಯರ್ಥಿಯನ್ನು ಘೋಷಿಸಿದ್ದೇವು. ದೆಹಲಿಯಲ್ಲಿ ನಮಗೆ ಸೋಲಾಯಿತು. ಹರಿಯಾಣಾ ಮತ್ತು ಜಾರ್ಖಂಡ್‌ನಲ್ಲಿ ಸಿಎಂ ಅಭ್ಯರ್ಥಿಯನ್ನು ಘೋಷಿಸಿರಲಿಲ್ಲ. ಆದಾಗ್ಯೂ ಚುನಾವಣೆಯಲ್ಲಿ ಬಿಜೆಪಿ ಜಯಭಾರಿ ಬಾರಿಸಿತು ಎಂದರು.
ಉತ್ತರಪ್ರದೇಶದ 403 ವಿಧಾನಸಭೆ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ 300 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಜಯಗಳಿಸಲಿದೆ. ಪಕ್ಷದ ಸಂಸದೀಯ ಸಮಿತಿ ಸಿಎಂ ಅಭ್ಯರ್ಥಿಯನ್ನು ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.
ಇದಕ್ಕಿಂತ ಮೊದಲು, ಮಾಜಿ ಮುಖ್ಯಮಂತ್ರಿ ಮಾಯಾವತಿ ಬಿಜೆಪಿಯ ಧಾರ್ಮಿಕ ನಾಯಕರನ್ನು ಮನಬಂದಂತೆ ಟೀಕಿಸುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಗುಡುಗಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ