Webdunia - Bharat's app for daily news and videos

Install App

ಅಮಿತ್ ಶಾ ಸ್ವಾಗತಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸಭೆ

Webdunia
ಗುರುವಾರ, 28 ಜನವರಿ 2016 (15:23 IST)
ಎರಡನೆಯ ಬಾರಿ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ಆಯ್ಕೆಯಾಗಿರುವ  ಅಮಿತ್ ಶಾ ಅವರ ಸ್ವಾಗತಕ್ಕಾಗಿ ಬಿಜೆಪಿ ಸಂಸದೀಯ ಮಂಡಳಿ ಇಂದು ಸಭೆ ಸೇರಲಿದೆ. 

ಮೋದಿಯವರ ಅತ್ಯಾಪ್ತರಾಗಿರುವ ಹೆಚ್ಚಿನ ಕೇಂದ್ರ ಸಚಿವರ, ಪಕ್ಷದ ಎಲ್ಲ ಮುಖ್ಯಮಂತ್ರಿಗಳು, ರಾಜ್ಯಾಧ್ಯಕ್ಷರ ಉಪಸ್ಥಿತಿಯಲ್ಲಿ ಶಾ ಅವರನ್ನು ಭಾನುವಾರ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. 
 
ಹೊಸ ಅವಧಿಗೆ ಶಾ ಅವರ ಹೆಸರನ್ನು ಪ್ರಸ್ತಾಪಿಸಿದ ನಾಯಕರಲ್ಲಿ ಒಬ್ಬರಾಗಿದ್ದ ಪ್ರಧಾನಿ ಮೋದಿಯವರು ಭಾನುವಾರ ನಡೆದ ಸಭೆಯಲ್ಲಿ ಭಾಗವಹಿಸಿರಲಿಲ್ಲ. 
 
ಪಕ್ಷದ ಮಾರ್ಗದರ್ಶಕ ಮಂಡಳಿ ಸದಸ್ಯರಾದ ಎಲ್.ಕೆ. ಆಡ್ವಾಣಿ, ಮುರಳಿ ಮನೋಹರ ಜೋಶಿ ಅವರು ಭಾನುವಾರ ಅಧ್ಯಕ್ಷರ ಪುನರಾಯ್ಕೆ ಸಂದರ್ಭದಲ್ಲಿ ಉಪಸ್ಥಿತರಿರಲಿಲ್ಲ.  ಆದರೆ ಅದೇ ದಿನ ಅವರಿಬ್ಬರನ್ನು ಭೇಟಿಯಾಗಿ ಶಾ ಆಶೀರ್ವಾದಗಳನ್ನು ಪಡೆದುಕೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. 
 
ಅಮಿತ್‌ ಶಾ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ದಿಲ್ಲಿ ಮತ್ತು ಬಿಹಾರದಲ್ಲಿ ಪಕ್ಷ ಸೋಲು ಕಂಡಿದ್ದರೂ ಮಹಾರಾಷ್ಟ್ರ, ಹರಿಯಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷ ಅಧಿಕಾರದ ಗದ್ದುಗೆ ಏರಿತ್ತು. ಅಲ್ಲದೆ ಹೆಚ್ಚಿನ ಅಸ್ತಿತ್ವ ಇಲ್ಲದ ಕೇರಳ, ಅಸ್ಸಾಂ, ಪಶ್ಚಿಮ ಬಂಗಾಲದಲ್ಲಿ ನೆಲೆಯೂರುವಲ್ಲಿ ಪಕ್ಷ ಯಶಸ್ವಿಯಾಗಿತ್ತು.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments