ಮುಂದಿನ ವರ್ಷ ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಜೆಪಿ, ಲಲಿತ್‌ಪುರ್, ಸೋನೆಭದ್ರಾ ಮತ್ತು ಬಲಿಯ ಜಿಲ್ಲೆಯಿಂದ ಪರಿವರ್ತನಾ ಯಾತ್ರೆಯನ್ನು ಆರಂಭಿಸಲು ನಿರ್ಧರಿಸಿದೆ. ನಂತರ ಸಿಎಂ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
ಮುಖ್ಯಮಂತ್ರಿ ಅಭ್ಯರ್ಥಿಗಳ ರೇಸ್‌ನಲ್ಲಿ ವರುಣ್ ಗಾಂಧಿ, ಕೇಶವ್ ಪ್ರಸಾದ್ ಮೌರ್ಯ ಮತ್ತು ರಾಜನಾಥ್ ಸಿಂಗ್ ಪ್ರಮುಖರಾಗಿದ್ದಾರೆ.
ಪರಿವರ್ತನಾ ಯಾತ್ರೆಯನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉದ್ಘಾಟಿಸಲಿದ್ದು, ರಾಷ್ಟ್ರ ಮತ್ತು ರಾಜ್ಯ ಮಟ್ಟದ ನಾಯಕರು ಉಪಸ್ಥಿತರಿರಲಿದ್ದು ಯಾತ್ರೆ ಡಿಸೆಂಬರ್ 24 ರಂದು ಲಕ್ನೋದಲ್ಲಿ ಅಂತ್ಯವಾಗಲಿದೆ.
ಪರಿವರ್ತನಾ ಯಾತ್ರೆ ನವೆಂಬರ್ 5 ರಿಂದ ಆರಂಭವಾಗಲಿದ್ದು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ 92ನೇ ಜನ್ಮದಿನವಾದ ಡಿಸೆಂಬರ್ 24 ರಂದು ಮುಕ್ತಾಯಗೊಳ್ಳಲಿದೆ ಎಂದು ಬಿಜೆಪಿ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಪರಿವರ್ತನ್ ಯಾತ್ರೆಯ ಕೊನೆಯ ದಿನವಾದ ಡಿಸೆಂಬರ್ 24 ರಂದು ಲಕ್ನೋದಲ್ಲಿ ಪಾಲ್ಗೊಳ್ಳುವ ಸಾಧ್ಯತೆಗಳಿವೆ ಎಂದು ಮೌರ್ಯ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ