ಮಾರ್ಚ್ 29 ರಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೈಸೂರಿಗೆ

Webdunia
ಗುರುವಾರ, 29 ಮಾರ್ಚ್ 2018 (14:00 IST)
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ  ಮತ್ತೆ ಎರಡು ದಿನಗಳ ಕಾಲ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮಾರ್ಚ್ 29ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಅಮಿತ್ ಷಾ ಬಂದಿಳಿಯಲಿದ್ದಾರೆ.
ಮಾರ್ಚ್ 30ರಂದು ಸುತ್ತೂರು ಮಠಕ್ಕೆ ಭೇಟಿ ನೀಡಿ, ಸುತ್ತೂರು ಮಠಾಧಿಪತಿಗಳಾಗಿರುವ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಜೊತೆ ಉಭಯಕುಶಲೋಪರಿ ನಡೆಸಿ ಆಶೀರ್ವಚನ ಪಡೆದುಕೊಳ್ಳಲಿದ್ದಾರೆ.
 
ಬಳಿಕ ಮೈಸೂರು ಅರಮನೆಯಲ್ಲಿರುವ ರಾಜಮನೆತನದ ಖಾಸಗಿ ನಿವಾಸಕ್ಕೆ ತೆರಳಿ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಜೊತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.ಆನಂತರ ಕ್ಯಾತಮಾರನಹಳ್ಳಿಯಲ್ಲಿರುವ ಮೃತ ಬಿಜೆಪಿ ಕಾರ್ಯಕರ್ತ ರಾಜು ನಿವಾಸಕ್ಕೆ ಭೇಟಿ ನೀಡಲಿದ್ದಾರೆ.ನಂತರ ಕೃಷ್ಣರಾಜ, ನರಸಿಂಹರಾಜ, ಚಾಮರಾಜ ಕ್ಷೇತ್ರದ ಬಿಜೆಪಿ ನವಶಕ್ತಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. 
 
ನಂತರ ದಲಿತ ಮುಖಂಡರ ನಿವಾಸಕ್ಕೆ ಭೇಟಿ ನೀಡಿ ಸಂವಾದ ನಡೆಸುವುದರ ಜೊತೆಗೆ ಮಧ್ಯಾಹ್ನದ ಭೋಜನ ಸ್ವೀಕರಿಸಲಿದ್ದಾರೆ.ಆ ಬಳಿಕ ಚಾಮರಾಜನಗರ ಜಿಲ್ಲಾ ಪ್ರವಾಸದಲ್ಲಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಚುನಾವಣೆ ಫಲಿತಾಂಶ ದಿನವೇ ವಿದೇಶಕ್ಕೆ ಹಾರಲಿರುವ ರಾಹುಲ್ ಗಾಂಧಿ: ತಿಂಗಳಂತ್ಯದವರೆಗೂ ಫಾರಿನ್ ಟೂರ್

ಸಿದ್ದರಾಮಯ್ಯಗೆ ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸೋ ಚಾಳಿ: ಸಿಟಿ ರವಿ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಮುಂದಿನ ಸುದ್ದಿ
Show comments