Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ: ರಾಜೀನಾಮೆಗೆ ಮುಂದಾದ ಡಿಸಿಎಂ ಫಡ್ನವೀಸ್ -

sampriya
ಬುಧವಾರ, 5 ಜೂನ್ 2024 (16:08 IST)
Photo By X
ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ ಬಿಜೆಪಿಯು ಕಳಪೆ ಪ್ರದರ್ಶನ ತೋರಿರುವ ಹೊಣೆಹೊತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಅವರು ರಾಜೀನಾಮೆಗೆ ಮುಂದಾಗಿದ್ದಾರೆ.

ಒಟ್ಟು 48 ಕ್ಷೇತ್ರಗಳಲ್ಲಿ ಬಿಜೆಪಿಯು ಕೇವಲ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾರಣ ಉಪ ಮುಖ್ಯಮಂತ್ರಿ ಜವಾಬ್ದಾರಿಯಿಂದ ನಿಯುಕ್ತಿಗೊಳಿಸಿ ಎಂದು ಬಿಜೆಪಿ ಹೈಕಮಾಂಡ್‌ಗೆ ದೇವೇಂದ್ರ ಫಡ್ನವೀಸ್‌ ಅವರು ಮನವಿ ಮಾಡಿದ್ದಾರೆ.

ಇಂದು ಫಡ್ನವೀಸ್‌ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಇನ್ನಷ್ಟು ಬಲಿಷ್ಠವಾಗಲು ನಾನು ಸಂಘಟನೆ ಮಟ್ಟದಲ್ಲಿ ಕೆಲಸ ಮಾಡಲು ಇಚ್ಛಿಸುತ್ತೇನೆ ಎಂದು ಹೇಳಿದರು.

ಪಕ್ಷದ ಸಂಘಟನೆಗೆ ನನ್ನ ಆದ್ಯತೆ ಇರಲಿದೆ. ಪೂರ್ಣಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಹಾಗಾಗಿ, ಉಪ ಮುಖ್ಯಮಂತ್ರಿ ಹುದ್ದೆಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ  ಎಂಬುದಾಗಿ ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯು ಒಟ್ಟು 48 ಕ್ಷೇತ್ರಗಳ ಪೈಕಿ 23 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಬಿಜೆಪಿಯು ಈ ಬಾರಿ 9 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಕಾಂಗ್ರೆಸ್‌, ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ಹಾಗೂ ಎನ್‌ಸಿಪಿ (ಶರದ್‌ ಪವಾರ್)‌ ಅವರ ಮಹಾ ವಿಕಾಸ್‌ ಅಘಾಡಿಯು ಈ ಬಾರಿ 30 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ನೇತೃತ್ವದ ಎನ್‌ಡಿಎಯು ರಾಜ್ಯದಲ್ಲಿ 17 ಕ್ಷೇತ್ರಗಳಲ್ಲಿ ಮಾತ್ರ ಜಯಭೇರಿ ಬಾರಿಸಿದೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments