ಬಳ್ಳಾರಿ : ಅಕ್ಟೋಬರ್ 30 ರಂದು ನಡೆಯುವ ಹಾನಗಲ್, ಸಿಂದಗಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಹಾನಗಲ್, ಸಿಂಧಗಿ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಇಂದು ಹಾನಗಲ್, ಸಿಂದಗಿ ಉಪಚುನಾವಣೆಗೆ ಯಾರಿಗೆ ಟಿಕೆಟ್ ನೀಡಬೇಕು ಎಂಬುದು ನಿರ್ಧರವಾಗಲಿದೆ ಎಂದು ತಿಳಿಸಿದ್ದಾರೆ.
ಮೇಕೆದಾಟು ಯೋಜನೆ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ ಬೊಮ್ಮಾಯಿ, ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರದ ಅನುಮತಿ ಬೇಕಿಲ್ಲ. ತಮಿಳುನಾಡು ರಾಜಕೀಯ ಕಾರಣಕ್ಕಾಗಿ ಮೇಕೆದಾಟು ಬಗ್ಗೆ ಪ್ರಸ್ತಾಪ ಮಾಡುತ್ತಿದೆ.ಹಾಗಾಗಿ ಮೇಕೆದಾಟುಉ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.