Publish Date: Fri, 02 Nov 2018 (07:07 IST)
Updated Date: Fri, 02 Nov 2018 (07:12 IST)
ಜಮ್ಮು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಹಿರಿಯ ನಾಯಕ ಹಾಗೂ ಅವರ ಸಹೋದರರನ್ನು ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಗುರುವಾರ ರಾತ್ರಿ ಕಿಶ್ತ್‍ವಾರ್ ಜಿಲ್ಲೆಯಲ್ಲಿ ನಡೆದಿದೆ.
ರಾಜ್ಯ ಬಿಜೆಪಿ ಕಾರ್ಯದರ್ಶಿ ಅನಿಲ್ ಪರಿಹಾರ್ ಹಾಗೂ ಸಹೋದರ ಅಜಿತ್ ಉಗ್ರರ ಗುಂಡಿಗೆ ಬಲಿಯಾದ ದುರ್ದೈವಿಗಳು. ಇವರಿಬ್ಬರು ರಾತ್ರಿ ತಮ್ಮ ಅಂಗಡಿಯನ್ನು ಮುಚ್ಚಿ ತಮ್ಮ ವಾಹನದಲ್ಲಿ ಮನೆಗೆ ಬರುತ್ತಿದ್ದ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ.
ಈ ಘಟನೆಯಿಂದ ಗಂಭೀರ ಗಾಯಗೊಂಡಿದ್ದ ಅವರನ್ನು ಸಮೀಪ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯದಲ್ಲೆ ಇಬ್ಬರೂ ಮೃತಪಟ್ಟಿದ್ದಾರೆ. ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.