Publish Date: Wed, 29 Apr 2026 (13:00 IST)
Updated Date: Wed, 29 Apr 2026 (13:04 IST)
ಕೋಲ್ಕತ್ತಾ: ಪಶ್ಚಿಮ ಬಂಗಾಲದಲ್ಲಿ ಇಂದು ಎರಡನೇ ಹಂತದ ಚುನಾವಣೆ ಪ್ರಕ್ರಿಯೆ ಜಾರಿಯಲ್ಲಿದ್ದು ಹಲವು ಕಡೆ ಮತಯಂತ್ರಗಳಲ್ಲಿ ಬಿಜೆಪಿ ಚಿಹ್ನೆಗೆ ಟೇಪ್ ಹಾಕಿ ಮತದಾರರಿಗೆ ಕಾಣದಂತೆ ಮಾಡಲಾಗಿದೆ ಎಂದು ಆರೋಪ ಬಂದಿದ್ದು ಈ ಸಂಬಂಧ ಮರು ಮತದಾನ ಮಾಡುವಂತೆ ಬಿಜೆಪಿ ಆಗ್ರಹಿಸಿದೆ.
ಪಶ್ಚಿಮ ಬಂಗಾಲದ ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಫಾಲ್ಟಾ ವಿಧಾನಸಭೆ ಕ್ಷೇತ್ರದಲ್ಲಿ ಈ ರೀತಿ ಮತಯಂತ್ರಗಳಲ್ಲಿ ಬಿಜೆಪಿ ಚಿಹ್ನೆಯನ್ನು ಟೇಪ್ ಅಳವಡಿಸಿ ಮುಚ್ಚಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಬಿಜೆಪಿ ವಿಡಿಯೋಗಳನ್ನು ಬಿಡುಗಡೆ ಮಾಡಿದೆ.
ಟಿಎಂಸಿ ಕಾರ್ಯಕರ್ತರು ಬಿಜೆಪಿಗೆ ಮತ ಹಾಕದಂತೆ ಜನರನ್ನು ತಡೆಯಲು ಈ ರೀತಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ವಿಡಿಯೋ ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳ್ವಿಯಾ ಡೈಮಂಡ್ ಹಾರ್ಬರ್ ಮಾಡೆಲ್ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾವ ಮತಗಟ್ಟೆಗಳಲ್ಲಿ ಬಿಜೆಪಿ ಚಿಹ್ನೆಯನ್ನು ಟೇಪ್ ಅಳವಡಿಸಿ ಮುಚ್ಚಲಾಗಿದೆಯೋ ಅಲ್ಲೆಲ್ಲಾ ಮರು ಮತದಾನ ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಆರೋಪ ನಿಜವೆಂದು ಕಂಡುಬಂದಲ್ಲಿ ಮರು ಮತದಾನ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಭರವಸೆ ನೀಡಿದೆ.
About Writer
ಕೃಷ್ಣವೇಣಿ ಕೆ
Completed bachelor degree in Journalism and communication in SDMC Ujire. 15 years of experience as journalist. Worked as sub editor and reporter. Specialties in sports, politics and entertainment.....
ಮತ್ತಷ್ಟು ಓದಿ