Webdunia - Bharat's app for daily news and videos

Install App

ತಮಿಳುನಾಡು ವಿಧಾನಸಭೆ ಚುನಾವಣಾ ಮೈತ್ರಿಗೆ ಸಿದ್ಧತೆ; ಬಿಜೆಪಿ

Webdunia
ಶನಿವಾರ, 30 ಜನವರಿ 2016 (14:51 IST)
ತಮಿಳುನಾಡಿನ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸಶಕ್ತಿ ಮೈತ್ರಿಗಾಗಿ ಬಿಜೆಪಿ ಸಿದ್ಧತೆ ನಡೆಸಿದ್ದು ಇತರ ಪಕ್ಷಗಳೊಂದಿಗೆ ಮಾತುಕತೆ ಮುಂದುವರಿದಿದೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆ. 
 
ಇತರ ಪಕ್ಷಗಳೊಂದಿಗೆ ಮಾತುಕತೆ ಒಂದು ಹಂತಕ್ಕೆ ಬಂದ ನಂತರ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಎಚ್.ರಾಜಾ ಮತ್ತು ರಾಜ್ಯ ಘಟಕದ ಅಧ್ಯಕ್ಷೆ ತಮಿಳ್‌ಸಾಯಿ ಸೌಂದರ್‌‍ರಾಜನ್ ತಿಳಿಸಿದ್ದಾರೆ. 
 
ಫೆಬ್ರವರಿ 2 ರಂದು ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳಲಿರುವುದರಿಂದ ಕಾರ್ಯಕ್ರಮದ ಮೇಲ್ವಿಚಾರಣೆಗಾಗಿ ಇಬ್ಬರು ನಾಯಕರು ಭೇಟಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಒಂದು ವೇಳೆ, ಬಿಜೆಪಿ ಮೈತ್ರಿಕೂಟಕ್ಕೆ ಜನತೆ ಮತ ನೀಡಿದಲ್ಲಿ ಭ್ರಷ್ಟಾಚಾರರಹಿತ ಅಡಳಿತ ನೀಡುವುದರೊಂದಿಗೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
 
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷೆ ತಮಿಳುಸಾಯಿ ಮಾತನಾಡಿ, ರಾಜ್ಯದಲ್ಲಿ 50 ಲಕ್ಷ ಸದಸ್ಯರನ್ನುನೋಂದಾಯಿಸಿಕೊಳ್ಳಲಾಗಿದ್ದು, ಬಿಜೆಪಿಯ ಬೆಂಬಲವಿಲ್ಲದೇ ಯಾವುದೇ ಪಕ್ಷ ರಾಜ್ಯದಲ್ಲಿ ಸರಕಾರ ರಚಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments