ಉತ್ತರಪ್ರದೇಶದ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ನಾಲ್ಕು ಪರಿವರ್ತನ್ ಯಾತ್ರೆಗಳನ್ನು ಹಮ್ಮಿಕೊಳ್ಳಲಿದ್ದು ಸುಮಾರು 100 ದಿನಗಳ ಅವಧಿಯ ಯಾತ್ರೆ ಪ್ರಧಾನಿ ಮೋದಿಯವರ ಭಾಷಣದೊಂದಿಗೆ ತೆರೆ ಬೀಳಲಿದೆ ಎಂದು ಮೂಲಗಳು ತಿಳಿಸಿವೆ.
ನಾಲ್ಕು ಯಾತ್ರೆಗಳು ಸಹರಣ್‌ಪುರ್, ಲಲಿತ್‌ಪುರ್, ಸೋನಾಭದ್ರಾ ಮತ್ತು ಗೋರಖ್‌ಪುರ್ ಅಥವಾ ನಗರಗಳಿಂದ ಹೊರಡಲಿದ್ದು, ಮುಕ್ತಾಯದ ಹಂತದಲ್ಲಿ ಲಕ್ನೋ ನಗರಕ್ಕೆ ಬಂದು ಸೇರಲಿವೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಪರಿವರ್ತನ್ ಯಾತ್ರೆಯಲ್ಲಿ ಬಿಜೆಪಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮತ್ತು ಇತರ ಕೇಂದ್ರ ಸಚಿವರು ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.
ರಾಜ್ಯದ 91 ಜಿಲ್ಲೆಗಳಲ್ಲಿ ಯುವಕರು ಮತ್ತು ಮಹಿಳೆಯರ ಸಭೆಗಳನ್ನು ನಡೆಸಲು ಪಕ್ಷ ನಿರ್ಧರಿಸಿದೆ. ಇದರಿಂದಾಗಿ 52 ಸಾವಿರ ಪಂಚಾಯತಿಗಳಿಗೆ ಭೇಟಿ ನೀಡಿದಂತಾಗುತ್ತದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಮತ್ತು ಬಹಜನ ಸಮಾಜ ಪಕ್ಷದಿಂದ ತೀವ್ರ ಪೈಪೋಟಿ ಎದುರಿಸುತ್ತಿರುವ ಬಿಜೆಪಿ, ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ರಣತಂತ್ರ ರೂಪಿಸುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ